
ಅಲ್ಲು ಅರ್ಜುನ್ ತಮ್ಮ instagram ಖಾತೆಯಲ್ಲಿ ಅರ್ಹಾ ಜೊತೆಗಿನ ಫೋಟೋ ಹಂಚಿಕೊಂಡಿದ್ದು, ”ಅಪ್ಪನ ರಾಜಕುಮಾರಿ” ಎಂದು ಬರೆದುಕೊಂಡಿದ್ದಾರೆ. ಅವರ ಪತ್ನಿ ಸ್ನೇಹ ರೆಡ್ಡಿ ಕೂಡ ಮಗಳ ಫೋಟೋ ಅಪ್ಲೋಡ್ ಮಾಡುವ ಮೂಲಕ ವಿಶ್ ಮಾಡಿದ್ದಾರೆ.
ಸಿನಿಮಾ ವಿಚಾರಕ್ಕೆ ಬಂದರೆ ಅಲ್ಲು ಅರ್ಜುನ್ ನಟನೆಯ ‘ಪುಷ್ಪಾ 2; ದಿ ರೂಲ್’ ಮುಂದಿನ ತಿಂಗಳು ಡಿಸೆಂಬರ್ 5 ರಂದು ವಿಶ್ವದಾದ್ಯಂತ ತೆರೆ ಕಾಣಲಿದ್ದು ಭಾರತ ಚಿತ್ರರಂಗದಲ್ಲಿ ಹಲವು ದಾಖಲೆಗಳನ್ನು ಬರೆಯುವ ಲೆಕ್ಕಾಚಾರದಲ್ಲಿದೆ.
ಸುಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಅಲ್ಲು ಅರ್ಜುನ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮೊದಲ ಭಾಗ ಈಗಾಗಲೇ ಭರ್ಜರಿ ಯಶಸ್ಸು ಕಂಡಿದ್ದು, ಇದರ ಮುಂದಿನ ಭಾಗದ ಮೇಲೆ ಪ್ರೇಕ್ಷಕರು ಸಾಕಷ್ಟು ನಿರೀಕ್ಷೆ ಇಟ್ಟಿದ್ದಾರೆ.