ಸುನಿಲ್ ಕುಮಾರ್ ನಿರ್ದೇಶನದ ಬಹು ನಿರೀಕ್ಷಿತ ಆಕ್ಷನ್ ಫ್ಯಾಮಿಲಿ ಎಂಟರ್ಟೈನರ್ ಕಥಾ ಹಂದರ ಹೊಂದಿರುವ ‘ಗಜರಾಮ’ ಚಿತ್ರದ ಟೀಸರ್ ಇಂದು ಸಂಜೆ 5:00 ಗಂಟೆಗೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ.
ಲೈಫ್ ಲೈನ್ ಫಿಲಂ ಬ್ಯಾನರ್ ನಲ್ಲಿ ನರಸಿಂಹಮೂರ್ತಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು ರಾಜವರ್ಧನ್ ಮತ್ತು ತಪಸ್ವಿನಿ ಪೂಣಚ್ಚ ಪ್ರಮುಖ ಪಾತ್ರದಲ್ಲಿದ್ದು ಮನೋಮೂರ್ತಿ ಸಂಗೀತ ಸಂಯೋಜನೆ ನೀಡಿದ್ದಾರೆ.
ಧನಂಜಯ್ ನೃತ್ಯ ನಿರ್ದೇಶನ, ಜ್ಞಾನೇಶ್ ಮಾತಾಡ್ ಅವರ ಸಂಕಲನ ಹಾಗೂ ಚಂದ್ರಶೇಖರ್ ಛಾಯಾಗ್ರಾಣವಿದೆ. ಈಗಾಗಲೇ ಬಹುತೇಕ ಶೂಟಿಂಗ್ ಪೂರ್ಣಗೊಳಿಸಿರುವ ಚಿತ್ರ ತಂಡ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡುವ ನಿರೀಕ್ಷೆಯಲ್ಲಿದೆ.