
ಈಗಾಗಲೇ ತನ್ನ ಹಾಡುಗಳ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಯತಿರಾಜ್ ನಿರ್ದೇಶನದ ‘ಸಂಜು’ ಚಿತ್ರದ ಟೀಸರ್ ಇಂದು ಸಂಜೆ ಐದು ಗಂಟೆಗೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಇಂದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದೆ.
ಈ ಚಿತ್ರವನ್ನು ದಿಶಾ ಎಂಟರ್ಪ್ರೈಸಸ್ ಬ್ಯಾನರ್ ನಡಿ ಸಂತೋಷ್ ಮಹಾದೇವಪ್ಪ ನಿರ್ಮಾಣ ಮಾಡಿದ್ದು, ಮನ್ವಿತ್, ಶ್ರಾವ್ಯ ಮತ್ತು ಸಂಗೀತ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಸಂಜೀವ್ ರೆಡ್ಡಿ ಸಂಕಲನ, ವಿದ್ಯಾ ನಾಗೇಶ್ ಛಾಯಾಗ್ರಹಣ, ಮದನ್ ಮತ್ತು ಹರಿಣಿ ನೃತ್ಯ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ವಿಜಯ್ ಸಂಗೀತ ಸಂಯೋಜನೆ ನೀಡಿದ್ದಾರೆ. ಅರುಣ್ ಕುಮಾರ್ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.
