alex Certify ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು’ : ವಿವಾದ ಸೃಷ್ಟಿಸಿದ ವಸತಿ ಶಾಲೆಯಲ್ಲಿನ ಈ ‘ಬರಹ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು’ : ವಿವಾದ ಸೃಷ್ಟಿಸಿದ ವಸತಿ ಶಾಲೆಯಲ್ಲಿನ ಈ ‘ಬರಹ’

ಬೆಂಗಳೂರು : ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು’…! ಇದೇನಿದು ಅಂತ ಯೋಚಿಸುತ್ತಿದ್ದೀರಾ..? ವಸತಿ ಶಾಲೆಯಲ್ಲಿನ ಈ ಬರಹ ಈಗ ವಿವಾದಕ್ಕೆ ಕಾರಣವಾಗಿದೆ.

ಹೌದು. ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಬರಹವನ್ನು ತಿದ್ದುಪಡಿ ಮಾಡಲಾಗಿದೆ. ‘ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ’ ಎಂಬ ರಾಷ್ಟ್ರಕವಿ ಕುವೆಂಪು ಅವರ ಬರಹವನ್ನು ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು’… ಎಂದು ತಿದ್ದಲಾಗಿದೆ.

ಮೊರಾರ್ಜಿ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪೋಷಕರು ಧೈರ್ಯವಾಗಿ ಪ್ರಶ್ನೆ ಮಾಡಲಿ ಎಂದ ಉದ್ದೇಶದಿಂದ ಹೀಗೆ ಬರೆಯಲಾಗಿದೆ. ಮಕ್ಕಳ ಶಿಕ್ಷಣ ವಸತಿ ಊಟ ಸೇರಿದಂತೆ ವಸತಿ ಶಾಲೆಯ ಎಲ್ಲಾ ವಿಚಾರಗಳ ಕುರಿತು ಪೋಷಕರು ಪ್ರಶ್ನೆ ಮಾಡಲಿ ಎಂದು ಹೀಗೆ ಬರೆದಿದ್ದೇವೆ ಎಂದು ವಿಜಯಪುರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪುಂಡಲೀಕ ಹೇಳಿದ್ದಾರೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಳಪೂಜಿ ಗ್ರಾಮದಲ್ಲಿ ಹಾಗೂ ಇತರ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ದ್ವಾರದಲ್ಲಿ ಈ ಬರಹ ಕಂಡು ಬಂದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...