ಶಿವಮೊಗ್ಗ : ಸೂಪರ್ ಸ್ಟಾರ್ ರಜನಿ ಕಾಂತ್ ಅಭಿನಯದ ‘ಜೈಲರ್’ ಚಿತ್ರ ಪ್ರದರ್ಶನದ ವೇಳೆ ಥಿಯೇಟರ್ ಗೋಡೆ ಕುಸಿದು ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.
ತೀರ್ಥಹಳ್ಳಿಯ ಸೊಪ್ಪುಗುಡ್ಡೆಯ ಮಾರ್ಕೆಟ್ ರಸ್ತೆಯಲ್ಲಿರುವ ವಿನಾಯಕ ಚಿತ್ರಮಂದಿರದ ಗೋಡೆ ಧಿಡೀರ್ ಕುಸಿದು ಬಿದ್ದಿದೆ. ಹಳೇ ಕಟ್ಟವಾಗಿದ್ದರಿಂದ ಶಿಥಿಲಗೊಂಡ ಗೋಡೆ ಕುಸಿದಿದೆ.
ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಪ್ರೇಕ್ಷಕರಿಗೆ ಯಾವುದೇ ಅಪಾಯ ಆಗಿಲ್ಲ, ಆದರೆ ಥಿಯೇಟರ್ ಎದುರು ನಿಲ್ಲಿಸಿದ 7 ಬೈಕ್ ಗಳಿಗೆ ಹಾನಿಯಾಗಿದೆ. ಸೂಪರ್ ಸ್ಟಾರ್ ರಜನಿ ಕಾಂತ್ ಅಭಿನಯದ ‘ಜೈಲರ್’ ಚಿತ್ರ ಪ್ರದರ್ಶನದ ವೇಳೆ ಈ ಘಟನೆ ಸಂಭವಿಸಿದೆ. ರಜನಿ ಕಾಂತ್ ಅಭಿನಯದ ‘ಜೈಲರ್’ ಚಿತ್ರ ಯಶಸ್ವಿಯಾಗಿ ಮುನ್ನುಗ್ಗುತ್ತಿದ್ದು, ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದೆ.