
ಒಂದರ ಮೇಲೊಂದು ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ಸಾಕಷ್ಟು ಬಿಜಿಯಾಗಿರುವ ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರ ಹೊಸ ಚಿತ್ರದ ಟೈಟಲ್ ರಿವೀಲ್ ಮಾಡಲಾಗಿದೆ.
‘ಚೀತಾ’ ಎಂಬ ಟೈಟಲ್ ಇಡಲಾಗಿದ್ದು, ಟೈಟಲ್ ಪೋಸ್ಟರ್ ಅನ್ನು ಪ್ರಜ್ವಲ್ ದೇವರಾಜ್ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ರಾಜ ಕಲೈ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದು, ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಬ್ಯಾನರ್ ನಡಿ ಪ್ರತಿಭಾ ನರೇಶ್ ನಿರ್ಮಾಣ ಮಾಡುತ್ತಿದ್ದಾರೆ.
ಪ್ರಜ್ವಲ್ ದೇವರಾಜ್ ಅವರ 39ನೇ ಸಿನಿಮಾ ಎಂದು ಹೇಳಲಾಗಿದ್ದು, ಶೀಘ್ರದಲ್ಲಿ ಶೂಟಿಂಗ್ ಆರಂಭವಾಗಲಿದೆ.
