ಶ್ರೀನಗರ ಕಿಟ್ಟಿ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಸಂಜು ವೆಡ್ಸ್ ಗೀತಾ 2’ ಚಿತ್ರದ ಟ್ರೈಲರ್ ನಿನ್ನೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಈ ಟ್ರೈಲರ್ ಕೆಲವೇ ಗಂಟೆಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ.
ನಾಗಶೇಖರ್ ನಿರ್ದೇಶನದ ಈ ಚಿತ್ರವನ್ನು ಪವಿತ್ರ ಇಂಟರ್ನ್ಯಾಷನಲ್ ಮೂವಿ ಮೇಕರ್ಸ್ ಲಾಂಛನದಲ್ಲಿ ಛಲವಾದಿ ಕುಮಾರ್ ನಿರ್ಮಾಣ ಮಾಡಿದ್ದು, ವಿ ಶ್ರೀಧರ್ ಸಂಭ್ರಮ್ ಸಂಗೀತ ಸಂಯೋಜನೆ ನೀಡಿದ್ದಾರೆ. ಶ್ರೀನಗರ ಕಿಟ್ಟಿ ಹಾಗೂ ರಚಿತಾ ರಾಮ್ ಸೇರಿದಂತೆ ಸಾಧು ಕೋಕಿಲ ರಂಗಾಯಣ ರಘು ಸಂಪತ್ ಕುಮಾರ್ ತಬಲ ರಾಣಿ ಹಾಗೂ ವಿನೋದ್ ತೆರೆ ಹಂಚಿಕೊಂಡಿದ್ದಾರೆ. ಆಂಟೋನಿ ಸಂಕಲನ, ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ ಇದೇ ಜನವರಿ 17ರಂದು ಈ ಸಿನಿಮಾ ರಾಜ್ಯಾದ್ಯಂತ ತೆರೆಕಾಣಲಿದೆ.