alex Certify ನಾಳೆ ರಿಲೀಸ್ ಆಗಲಿದೆ ವಿಜಯ ರಾಘವೇಂದ್ರ ಅಭಿನಯದ ‘ಕೊಂಡಾಣ’ ಚಿತ್ರದ ಟ್ರೈಲರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ರಿಲೀಸ್ ಆಗಲಿದೆ ವಿಜಯ ರಾಘವೇಂದ್ರ ಅಭಿನಯದ ‘ಕೊಂಡಾಣ’ ಚಿತ್ರದ ಟ್ರೈಲರ್

ದೇವಿ ಪ್ರಸಾದ್ ಶೆಟ್ಟಿ ನಿರ್ದೇಶನದ ವಿಜಯ ರಾಘವೇಂದ್ರ ಅಭಿನಯದ ಬಹು ನಿರೀಕ್ಷಿತ ಕೊಂಡಾಣ ಚಿತ್ರದ ಟ್ರೈಲರ್ ಇದೇ ಜನವರಿ 12ರಂದು ಬಿಡುಗಡೆಯಾಗುತ್ತಿದೆ. ಈ ಕುರಿತು ವಿಜಯ ರಾಘವೇಂದ್ರ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ  ಹಂಚಿಕೊಂಡಿದ್ದಾರೆ.

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ವಿಜಯ ರಾಘವೇಂದ್ರ ಸೇರಿದಂತೆ ಭಾವನಾ ಮೆನನ್ ಮತ್ತು ಖುಷಿ ರವಿ ಪ್ರಮುಖ ಪಾತ್ರದಲ್ಲಿದ್ದಾರೆ. ಸಾತ್ವಿಕ್ ಹೆಬ್ಬಾರ್ ಹಾಗೂ ನಿರ್ದೇಶಕ ದೇವಿ ಪ್ರಸಾದ್ ಶೆಟ್ಟಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಗಗನ್ ಸಂಗೀತ ಸಂಯೋಜನೆ ನೀಡಿದ್ದಾರೆ. ಶಶಾಂಕ್ ನಾರಾಯಣ ಅವರ ಸಂಕಲನವಿದ್ದು, ವಿಶ್ವಜಿತ್ ರಾವ್ ಛಾಯಾಗ್ರಹಣವಿದೆ.

ಜನವರಿ 26ರಂದು ಈ ಸಿನಿಮಾ ರಾಜ್ಯಾದ್ಯಂತ ತೆರೆ ಮೇಲೆ ಬರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...