)
ಸಂತೋಷ್ ಆನಂದ್ ರಾಮ್ ನಿರ್ದೇಶನದ ಯುವ ರಾಜ್‌ಕುಮಾರ್ ಅಭಿನಯದ ‘ಯುವ’ ಚಿತ್ರದ ಟ್ರೈಲರ್ ಹೊಂಬಾಳೆ ಫಿಲಂಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್ ರಿಲೀಸ್ ಆದ ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ಯೂಟ್ಯೂಬ್ ನಲ್ಲಿ ಧೂಳ್ ಎಬ್ಬಿಸಿದೆ.
ಈ ಚಿತ್ರದಲ್ಲಿ ಯುವರಾಜ್ ಕುಮಾರ್ ಸೇರಿದಂತೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಸುಧಾರಾಣಿ, ಮತ್ತು ಕಿಶೋರ್, ತೆರೆ ಹಂಚಿಕೊಂಡಿದ್ದು, ಹೊಂಬಾಳೆ ಫಿಲಂಸ್ ಬ್ಯಾನರ್ ನಲ್ಲಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದಾರೆ.
ಆಶಿಕ್ ಸಂಕಲನ, ಮತ್ತು ಶ್ರೀಶ ಕುಡುವಳ್ಳಿ ಛಾಯಾಗ್ರಹಣವಿದೆ. ಅಜನೇಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದಾರೆ.