ಸ್ಯಾಂಡಲ್ ವುಡ್ ನಲ್ಲಿ ಭರ್ಜರಿ ಸೌಂಡ್ ಮಾಡುತ್ತಿರುವ ಯುವ ರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಯುವ’ ಚಿತ್ರದ ಟ್ರೈಲರ್ ನಾಳೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಹೊಂಬಾಳೆ ಫಿಲಂಸ್ ತನ್ನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದೆ.
ಸಂತೋಷ್ ಆನಂದ್ ರಾಮ್ ನಿರ್ದೇಶನದ ಈ ಚಿತ್ರವನ್ನು ಹೊಂಬಾಳೆ ಫಿಲಂಸ್ ಬ್ಯಾನರ್ ನಲ್ಲಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದು, ಯುವರಾಜ್ ಕುಮಾರ್ ಜೊತೆ ಸಪ್ತಮಿ ಗೌಡ ನಾಯಕಿಯಾಗಿ ಅಭಿನಯಿಸಿದ್ದಾರೆ. ಆಶಿಕ್ ಸಂಕಲನ, ಶ್ರೀಶಾ ಕುಡುವಳ್ಳಿ ಛಾಯಾಗ್ರಹಣವಿದೆ. ಇನ್ನುಳಿದಂತೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದಾರೆ.