alex Certify ಮಿಲನಾ-ಪೃಥ್ವಿ ನಟನೆಯ ʻಫಾರ್ ರಿಜಿಸ್ಟ್ರೇಷನ್’ ಚಿತ್ರದ ಟ್ರೇಲರ್ ರಿಲೀಸ್ |Watch Trailer | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಿಲನಾ-ಪೃಥ್ವಿ ನಟನೆಯ ʻಫಾರ್ ರಿಜಿಸ್ಟ್ರೇಷನ್’ ಚಿತ್ರದ ಟ್ರೇಲರ್ ರಿಲೀಸ್ |Watch Trailer

ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಬಹಳ ಕುತೂಹಲ ಕೆರಳಿಸಿದ್ದ ಬಹು ನಿರೀಕ್ಷಿತ ʻಫಾರ್ ರಿಜಿಸ್ಟ್ರೇಷನ್’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ.

ದಿಯಾ ಖ್ಯಾತಿಯ ಪ್ರಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ್ ನಟಿಸಿರುವ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ನಟ ಪೃಥ್ವಿ ಅಂಬಾರ್ ಮಾತನಾಡಿ, ಫಾರ್ ರಿಜಿಸ್ಟ್ರೇಷನ್ ಎರಡು ಸಹಪಾಠಿಗಳ ಪ್ರಯತ್ನ ಇದು. ಇಬ್ಬರು ನವೀನ್ ಅವರ ಕನಸಿನ ಕೂಸು ಇದು. ತುಂಬಾ ಹಾರ್ಡ್ ವರ್ಕ್ ಆಗಿದೆ ಎಂದರು.

ಸಂಬಂಧಗಳ ಮಹತ್ವದ ಬಗ್ಗೆ ತಿಳಿಸುವ ಸಿನಿಮಾ ಇದಾಗಿದ್ದು, ಚಿತ್ರದಲ್ಲಿ ರವಿಶಂಕರ್, ತಬಲಾ ನಾಣಿ. ಸುಧಾ ಬೆಳವಾಡಿ, ಬಾಬು ಹಿರಣಯ್ಯ, ರಮೇಶ್ ಭಟ್. ಉಮೇಶ್ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ಸಂಗೀತ ಸಂಯೋಜನೆ ಆರ್.ಕೆ ಹರೀಶ್, ಅಭಿಲಾಷ್ ಕಲಾತಿ, ಅಭಿಷೇಕ್ ಜಿ.ಕಾಸರಗೋಡು ಛಾಯಾಗ್ರಹಣ, ಮನು ಶೇಡ್ಗರ್ ಸಂಕಲನ ಚಿತ್ರಕ್ಕಿದೆ. ಈ ಸಿನಿಮಾ ಫೆ.23 ರಂದು ರಾಜ್ಯಾದ್ಯಂತ ತೆರೆಕಾಣಲಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...