
ರಾಜ್ ಗುರು ರಚಿಸಿ ನಿರ್ದೇಶಿಸಿರುವ ಕೆರೆಬೇಟೆ ಚಿತ್ರದ ಮಲೆನಾಡ ಗೊಂಬೆ ಎಂಬ ವಿಡಿಯೋ ಹಾಡು ನಾಳೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಜನಪ್ರಿಯ ಯೂಟ್ಯೂಬ್ ಚಾನೆಲ್ ಅದ a2 ಮ್ಯೂಸಿಕ್ ನಲ್ಲಿ ಈ ಹಾಡನ್ನು ವೀಕ್ಷಿಸಬಹುದಾಗಿದೆ.
ಟೀಸರ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಈ ಸಿನಿಮಾದಲ್ಲಿ ಗೌರಿಶಂಕರ್ ನಾಯಕ ನಟನಾಗಿ ಅಭಿನಯಿಸಿದ್ದು, ಬಿಂದು ಶಿವರಾಂ, ಗೋಪಾಲ್ ದೇಶ್ಪಾಂಡೆ, ಸಂಪತ್ ಮೈತ್ರಿಯ, ಹರಿಣಿ ಶ್ರೀಕಾಂತ್, ರಾಕೇಶ್ ಪೂಜಾರಿ, ವರ್ಧನ್ ತೀರ್ಥಹಳ್ಳಿ, ಹಾಗೂ ರಾಮದಾಸ್ ಸೇರಿದಂತೆ ಹಲವರ ತಾರಾ ಬಳಗವಿದೆ. ಜನಮನ ಸಿನಿಮಾಸ್ ಬ್ಯಾನರ್ ನಲ್ಲಿ ಜೈ ಶಂಕರ್ ಪಾಟೀಲ್ ನಿರ್ಮಾಣ ಮಾಡಿದ್ದಾರೆ. ಜ್ಞಾನೇಶ್ ಮಾತಾಡ್ ಸಂಕಲನ ಹಾಗೂ ಕೀರ್ತನ್ ಪೂಜಾರಿ ಛಾಯಾಗ್ರಹಣವಿದೆ.
