ಸತೀಶ್ ನೀನಾಸಂ ಅಭಿನಯದ ಮನೋಹರ್ ಕಾಂಪಲ್ಲಿ ನಿರ್ದೇಶನದ ‘ಮ್ಯಾಟ್ನಿ’ ಚಿತ್ರದ ”ನಿನಗಾಗೇ ಮಿಡಿಯುವುದು” ಎಂಬ ವಿಡಿಯೋ ಹಾಡು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದೆ.
ಈ ಚಿತ್ರದಲ್ಲಿ ಸತೀಶ್ ನೀನಾಸಂ ಮತ್ತು ಡಿಂಪಲ್ ಕ್ವೀನ್ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿದ್ದು, ದಿಗಂತ್ ದಿವಾಕರ್, ಪೂರ್ಣಚಂದ್ರ ಮೈಸೂರು, ನಾಗಭೂಷಣ್, ಶಿವರಾಜ್ ಕೆ ಆರ್ ಪೇಟೆ, ಅದಿತಿ ಪ್ರಭುದೇವ ತೆರೆ ಹಂಚಿಕೊಂಡಿದ್ದಾರೆ. ಕೆ ಪ್ರಕಾಶ್ ಸಂಕಲನ, ಸುಧಾಕರ್ ರಾಜ್ ಛಾಯಾಗ್ರಹಣವಿದೆ. F3 ಪ್ರೊಡಕ್ಷನ್ ಬ್ಯಾನರ್ ನಲ್ಲಿ ಪಾರ್ವತಿ ಗೌಡ ನಿರ್ಮಾಣ ಮಾಡಿದ್ದಾರೆ.