
ನವೆಂಬರ್ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿರುವ ಶುಗರ್ ಫ್ಯಾಕ್ಟರಿ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇದೇ ಅಕ್ಟೋಬರ್ 13ರಂದು ವಿಡಿಯೋ ಹಾಡನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡುವುದಾಗಿ ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.
ದೀಪಕ್ ಅರಸ್ ನಿರ್ದೇಶನದ ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕ ನಟನಾಗಿದ್ದು ಅದ್ವಿತ ಶೆಟ್ಟಿ, ಸೋನಾಲ್ ರೂಹಾನಿ ಶೆಟ್ಟಿ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ.
ರೋಮ್ಯಾಂಟಿಕ್ ಡ್ರಾಮ ಕಥಾಂದರ ಹೊಂದಿರುವ ಈ ಚಿತ್ರವನ್ನು ಬಾಲಮಣಿ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಆರ್ ಗಿರೀಶ್ ನಿರ್ಮಾಣ ಮಾಡಿದ್ದಾರೆ. ಸಂತೋಷ್ ಛಾಯಾಗ್ರಾಹಣವಿದ್ದು, ಕೆ ಎಂ ಪ್ರಕಾಶ್ ಸಂಕಲನವಿದೆ. ಕಬೀರ್ ರಫಿ ಸಂಗೀತ ಸಂಯೋಜನೆ ನೀಡಿದ್ದಾರೆ.
