ಬೆಂಗಳೂರು : ಯಾರು ಕುಂಬಳ ಕಾಯಿ ಕಳ್ಳ ಎಂದು ಇಡೀ ದೇಶಕ್ಕೆ ಗೊತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಸುಮಲತಾ ತಿರುಗೇಟು ನೀಡಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸುಮಲತಾ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಯಾರು ಕುಂಬಳ ಕಾಯಿ ಕಳ್ಳ ಎಂದು ಇಡೀ ದೇಶಕ್ಕೆ ಗೊತ್ತಿದೆ, ನಾನು ಹೇಳುವುದಕ್ಕೆ ಹೋಗಲ್ಲ.ಅವರು ನನ್ನ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ, ನನಗೂ ಅವರ ಅವಶ್ಯಕತೆ ಇಲ್ಲ ಎಂದು ಹೇಳಿದರು.
ಅಂಬರೀಶ್ ಯಾವತ್ತೂ ಅಧಿಕಾರಕ್ಕಾಗಿ ಆಸೆಪಟ್ಟವರಲ್ಲ. ನಾನೂ ಅಂಬರೀಶ್ ಅವರನ್ನು ನೋಡಿಕೊಂಡು ಬಂದಿದ್ದೇನೆ. ಇಂದು ನನ್ನ ನಿರ್ಧಾರ ಪ್ರಕಟಿಸಲಿದ್ದೇನೆ. ನನ್ನ ಜೊತೆ ದರ್ಶನ್, ಅಭಿಷೇಕ್ ಅಂಬರೀಷ್ ಇರಲಿದ್ದಾರೆ ಎಂದು ಸುಮಲತಾ ಹೇಳಿದರು. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ವಂಚಿತರಾಗಿರುವ ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಅವರು ಇಂದು ತಮ್ಮ ರಾಜಕೀಯ ನಿರ್ಧಾರ ಪ್ರಕಟಿಸಲಿದ್ದಾರೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಕಾಳಿಕಾಂಬ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಅಲ್ಲಿಂದಲೇ ಅವರು ಮಂಡ್ಯ ಕಾರ್ಯಕರ್ತರ ಸಭೆ ಆಗಮಿಸಲಿದ್ದಾರೆ.