ಉತ್ತರ ಪ್ರದೇಶ : ದೇಶದ ಹಲವಾರು ಸ್ಥಳಗಳಿಂದ ಅಯೋಧ್ಯೆಗೆ ಸಂಪರ್ಕವನ್ನು ಸುಧಾರಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ, ಜನವರಿ 22ರ ‘ಐತಿಹಾಸಿಕ ಕ್ಷಣ’ಕ್ಕಾಗಿ ಇಡೀ ಜಗತ್ತು ಕಾಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಅಯೋಧ್ಯೆ ಧಾಮ್ ರೈಲ್ವೆ ನಿಲ್ದಾಣ ಮತ್ತು ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಧಾನಿ ಉದ್ಘಾಟಿಸಿದ ನಂತರ ಮತ್ತು ಎಂಟು ಹೊಸ ರೈಲು ಮಾರ್ಗಗಳಿಗೆ ಹಸಿರು ನಿಶಾನೆ ತೋರಿದ ನಂತರ ಅವರು ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜನವರಿ 22, 2024 ರಂದು ‘ರಾಮ ಮಂದಿರ’ ಪ್ರತಿಷ್ಠಾಪನೆ ನಡೆಯಲಿದೆ. ಇಂತಹ ಐತಿಹಾಸಿಕ ಕ್ಷಣಗಳಿಗಾಗಿ ಇಡೀ ಜಗತ್ತಿನ ಜನರು ಕಾಯುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು. ನಾನು ಭಾರತದ ಪ್ರತಿಯೊಂದು ಮಣ್ಣಿನ ಕಣ ಮತ್ತು ಜನರ ಆರಾಧಕ. ನನಗೂ ನಿಮ್ಮಷ್ಟೇ ಕುತೂಹಲವಿದೆ” ಎಂದರು.
ಶ್ರೀರಾಮನ ದರ್ಶನಕ್ಕೆ ಇಡೀ ಜಗತ್ತು ಕಾದಿದೆ. ಜ.22 ರಂದು ಇಡೀ ಹಿಂದೂಸ್ತಾನವೇ ಝಗಮಗಿಸುತ್ತದೆ. ಈ ಐತಿಹಾಸಿಕ ಕ್ಷಣ ನನ್ನ ಜೀವನದಲ್ಲಿ ಬಂದಿರುವುದು ಬಹಳ ಸಂತೋಷ ಎಂದರು.
ಇದೇ ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಗುಡಾರದಲ್ಲಿ ಕುಳಿತಿದ್ದ ಕಾಲವಿತ್ತು ಮತ್ತು ಇಂದು ರಾಮ ಲಲ್ಲಾ ಮಾತ್ರವಲ್ಲ, ದೇಶದ ನಾಲ್ಕು ಕೋಟಿ ಬಡವರಿಗೂ ಶಾಶ್ವತ ಮನೆ ಸಿಕ್ಕಿದೆ ಎಂದು ಪ್ರಧಾನಿ ಹೇಳಿದರು.