
ದಾವಣಗೆರೆ: ಚಿತ್ರಮಂದಿರದಲಿ ಅಗ್ನಿ ಅವಘಡ ಸಂಭವಿಸಿದ್ದು, ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರು ಗಣೇಶ್ ಚಿತ್ರಮಂದಿರದಲ್ಲಿ ನಡೆದಿದೆ.
ಥಿಯೇಟನ್ ರಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಸಮಯದಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಚಿತ್ರಮಂದಿರಕ್ಕೆ ವ್ಯಾಪಿಸಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಇದು ಪಟ್ಟಣದ ಮೊದಲ ಚಿತ್ರಮಂದಿರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಆದರೆ ಕಲೆಕ್ಷನ್ ಇಲ್ಲದೇ ಒಟಿಟಿ ಹೊಡೆತಕ್ಕೆ ಸಿಲುಕಿ ನಷ್ಟದಲ್ಲಿತ್ತು. ಕೆಲ ವರ್ಷಗಳಿಂದ ಚಿತ್ರಮಂದಿರದ ಬಾಗಿಲು ಮುಚ್ಚಲ್ಪಟ್ಟಿತ್ತು. ಇದೀಗ ಏಕಾಏಕಿ ಬೆಂಕಿ ಅವಘಡಕ್ಕೆ ತುತ್ತಾಗಿದೆ.