alex Certify ಮನೆಯಲ್ಲೇ ಅತ್ತೆಯ ಚಿನ್ನಾಭರಣ ದೋಚಿದ್ದ ಸೊಸೆ ಸೇರಿ ಇಬ್ಬರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಲ್ಲೇ ಅತ್ತೆಯ ಚಿನ್ನಾಭರಣ ದೋಚಿದ್ದ ಸೊಸೆ ಸೇರಿ ಇಬ್ಬರು ಅರೆಸ್ಟ್

ಶಿವಮೊಗ್ಗ: ಮನೆಯಲ್ಲಿದ್ದ ಅತ್ತೆಯ ಚಿನ್ನಾಭರಣ ಕಳವು ಮಾಡಿದ್ದ ಸೊಸೆ ಸೇರಿ ಇಬ್ಬರನ್ನು ಶಿವಮೊಗ್ಗದ ತುಂಗಾನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ.

ಮಳಲಕೊಪ್ಪ ಗ್ರಾಮದ ರೇಣುಕಮ್ಮ ಅವರ ಮನೆಯಲ್ಲಿ ಕಳ್ಳತನವಾಗಿದ್ದು, ಪೊಲೀಸರಿಗೆ ದೂರು ನೀಡಲಾಗಿತ್ತು. ಮನೆಯ ಬೀರುವಿನಲ್ಲಿದ್ದ 4.30 ಲಕ್ಷ ರೂಪಾಯಿ ಮೌಲ್ಯದ 90 ಗ್ರಾಂ ಚಿನ್ನಾಭರಣ 2,050 ರೂ. ನಗದು ದೋಚಲಾಗಿತ್ತು. ಸೊಸೆ ಹೇಮಾವತಿ(23) ಹಾಗೂ ಅದೇ ಗ್ರಾಮದ ಎದುರುಮನೆಯ ಸತೀಶ್(22) ಚಿನ್ನಾಭರಣ ಕಳವು ಮಾಡಿದ್ದರು. ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಕಳವು ಮಾಡಿದ್ದ ಚಿನ್ನಾಭರಣ ಮತ್ತು ನಗದು ವಶಕ್ಕೆ ಪಡೆಯಲಾಗಿದೆ.

ಎಸ್.ಪಿ. ಕೆ, ಮಿಥುನ್ ಕುಮಾರ್ ಮಾರ್ಗದರ್ಶನದಲ್ಲಿ ಡಿ.ವೈ.ಎಸ್.ಪಿ. ಬಾಲರಾಜು, ತುಂಗಾನಗರ ಠಾಣೆ ಪಿಐ ಬಿ. ಮಂಜುನಾಥ್ ನೇತೃತ್ವದಲ್ಲಿ ತುಂಗಾನಗರ ಠಾಣೆ ಪೊಲೀಸರು ಕಳವು ಪ್ರಕರಣದ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...