ಕೊಡಗು : ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿನ ಮೇಲೆ ‘ಮೊಟ್ಟೆ’ ಎಸೆದ ಘಟನೆಯನ್ನು ಸಿಎಂ ಸಿದ್ದರಾಮಯ್ಯ ನೆನಪಿಸಿಕೊಂಡಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ ‘ವಿರೋಧ ಪಕ್ಷದ ನಾಯಕನಾಗಿ ಕೊಡಗಿಗೆ ಬಂದಿದ್ದಾಗ ಕೆಲವು ಕಿಡಿಗೇಡಿಗಳು ನನ್ನ ಮೇಲೆ ಮೊಟ್ಟೆ ಎಸೆದಿದ್ದರು. ಮುಖ್ಯಮಂತ್ರಿಯಾಗಿ ಇಂದು ಬಂದಾಗ ಕೊಡಗಿನ ಸಮಸ್ತ ಸಜ್ಜನ ಜನಸಮೂಹ ಪ್ರೀತಿಯ ಹೂಮಳೆಯಲ್ಲಿ ನನ್ನನ್ನು ಮುಳುಗಿಸಿದೆ. ಇದು ಕೊಡಗಿನ ಸಜ್ಜನರ ಗೆಲುವು, ಇದೇ ಪ್ರಜಾಪ್ರಭುತ್ವದ ಸೌಂದರ್ಯ ಪೋಸ್ಟ್ ಮಾಡಿದ್ದಾರೆ.
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಭಾರಿ ವಾಗ್ವಾದ ನಡೆದಿತ್ತು. ಸಂಪತ್ ಎಂಬ ವ್ಯಕ್ತಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದನು.