ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಸಿದುಕೊಳ್ತಿರೋದೆ ‘ಕೈ’ ಕರಾಮತ್ತು : ಕಾಂಗ್ರೆಸ್ ವಿರುದ್ಧ HDK ಕಿಡಿ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆ ಹಾಲಿನ ದರವನ್ನೂ 3 ರೂಪಾಯಿ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಲ್ಕೋಹಾಲಿನ ದರ ಏರಿಕೆ ಬಳಿಕ ಹಾಲಿನ ದರ ಏರಿಕೆ ಮಾಡುವ ಮೂಲಕ ರಾಜ್ಯ ಸರ್ಕಾರ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯಲ್ಲಿ ಕೊಟ್ಟು, ಇನ್ನೊಂದು ಕೈಯಲ್ಲಿ ಕಸಿದುಕೊಳ್ಳುತ್ತಿದೆ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸ್ವತ: ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು ಈಗ ಜನರ ಕಿವಿ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ. ಚುನಾವಣೆಗೆ ಮುನ್ನ ಕಾಂಗ್ರೆಸ್ ನವರು ಬೆಲೆ ಏರಿಕೆ ಬಗ್ಗೆ ಬಾಯಿ ಬಡಿದುಕೊಂಡರು. ಬಾನಗಡಿಯನ್ನೇ ಮಾಡಿದರು. ಈಗ ತಾವೇ ಅಧಿಕಾರಕ್ಕೆ ಬಂದ ಬಳಿಕ ಬೆಲೆ ಏರಿಕೆಯ ಸರಣಿ ಶಾಕ್ ನೀಡುತ್ತಿದ್ದಾರೆ… ಹೇಗಿದೆ ಕೈ ಕರಾಮತ್ತು…. ಅನ್ನಭಾಗ್ಯದ ಹಣವನ್ನು, ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತೀಯ ನೀತಿಗೆ ಧಿಕ್ಕಾರ ಎಂದು ಗುಡುಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read