ಒಣದ್ರಾಕ್ಷಿಯ ಉಪಯೋಗ ಹಲವರಿಗೆ ತಿಳಿದಿಲ್ಲ. ಇದನ್ನು ಮನೆಯಲ್ಲಿ ಮಕ್ಕಳಿಗೂ ಸೇರಿದಂತೆ ಎಲ್ಲರೂ ದಿನನಿತ್ಯ ತಿನ್ನುವುದರಿಂದ ಹಲವು ಲಾಭಗಳನ್ನು ಪಡೆದುಕೊಳ್ಳಬಹುದು.
ಮುಖ್ಯವಾಗಿ ಇದು ರಕ್ತಹೀನತೆ ಸಮಸ್ಯೆಯನ್ನು ನಿವಾರಿಸಿ ಹಿಮೋಗ್ಲೋಬಿನ್ ಪ್ರಮಾಣವನ್ನು ವೃದ್ಧಿಸುತ್ತದೆ. ರಾತ್ರಿ ಮಲಗುವ ಮುನ್ನ ಒಣದ್ರಾಕ್ಷಿಯನ್ನು ನೀರಿನಲ್ಲಿ ನೆನೆಸಿಡಿ. ಬೆಳಗ್ಗೆ ಎದ್ದ ತಕ್ಷಣ ಈ ನೀರಿನ ಸಮೇತ ದ್ರಾಕ್ಷಿ ಸೇವನೆ ಮಾಡುವುದರಿಂದ ಕರುಳು ಸ್ವಚ್ಛಗೊಳ್ಳುತ್ತದೆ.
ಕೊಲೆಸ್ಟ್ರಾಲ್ ಕರಗಿಸಲು ಇದು ಸಹಕಾರಿ. ಹಾಗಾಗಿ ಹೃದಯ ಸಂಬಂಧಿ ಸಮಸ್ಯೆಗಳು ನಿಮ್ಮ ಸಮೀಪಕ್ಕೂ ಸುಳಿಯುವುದಿಲ್ಲ. ಮೂತ್ರಪಿಂಡಗಳ ಕಲ್ಮಶಗಳನ್ನು ನಿವಾರಿಸುತ್ತದೆ.
ಇದರಲ್ಲಿ ಬ್ಯಾಕ್ಟೀರಿಯಾ ವಿರೋಧಿ ಗುಣಗಳಿದ್ದು ಬಾಯಿ, ಹಲ್ಲಿನಲ್ಲಿರುವ ಬ್ಯಾಕ್ಟೀರಿಯಾಗಳನ್ನು ತೊಲಗಿಸಿ ದುರ್ವಾಸನೆಯನ್ನು ಕಡಿಮೆ ಮಾಡುತ್ತದೆ. ಇದರಲ್ಲಿ ಹೇರಳ ಪ್ರಮಾಣದ ಕ್ಯಾಲ್ಸಿಯಂ ಮತ್ತು ಪೋಷಕಾಂಶಗಳಿದ್ದು ದೇಹ ತೂಕ ಕಡಿಮೆ ಮಾಡಲೂ ನೆರವಾಗುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಲೂ ಇದು ಸಹಕಾರಿ. ದೃಷ್ಟಿ ಹೀನತೆಯನ್ನೂ ತಡೆಗಟ್ಟುತ್ತದೆ.