ಒತ್ತಡ, ಚಿಂತೆ, ಕೆಲಸದೊತ್ತಡ, ನಿದ್ರೆಯ ಕೊರತೆ, ಆಲ್ಕೋಹಾಲ್ ಸೇವನೆಯಿಂದ ಕಣ್ಣಿನ ಸುತ್ತಲೂ ಕಪ್ಪು ವರ್ತುಲಗಳು ಮೂಡುತ್ತವೆ. ಇದು ನಿಮ್ಮ ಅಂದವನ್ನು ಕೆಡಿಸುತ್ತದೆ. ಹಾಗಾಗಿ ಈ ಡಾರ್ಕ್ ಸರ್ಕಲ್ ನ್ನು ನಿವಾರಿಸಲು ಅನೇಕ ಮನೆ ಮದ್ದುಗಳಿವೆ. ಅದರ ಜೊತೆಗೆ ಈ ತರಕಾರಿ ಮತ್ತು ಹಣ್ಣುಗಳನ್ನು ಸೇವಿಸಿ.
*ಟೊಮೆಟೊ : ಈ ಹಣ್ಣಿನಲ್ಲಿ ಆಂಟಿಆಕ್ಸಿಡೆಂಟ್ ಗಳು ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ. ಇದು ಚರ್ಮವನ್ನು ಆರೋಗ್ಯವಾಗಿಡುತ್ತದೆ. ಹಾಗಾಗಿ ವಿಟಮಿನ್ ಸಿ ಸಮೃದ್ಧವಾಗಿರುವ ಕಿತ್ತಳೆ, ನಿಂಬೆ ಇವುಗಳನ್ನು ಸೇವಿಸಿ.
*ಸೌತೆಕಾಯಿ : ಇದು ಚರ್ಮದ ಆರೋಗ್ಯವನ್ನು ಕಾಪಾಡಲು ಸಹಕಾರಿ. ಇದು ಚರ್ಮವನ್ನು ತಂಪಾಗಿಸುತ್ತದೆ. ಇದು ಚರ್ಮದ ಸ್ಥಿತಿ ಸ್ಥಾಪಕತ್ವವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
*ವಿಟಮಿನ್ ಇ : ವಿಟಮಿನ್ ಇ ಚರ್ಮಕ್ಕೆ ತುಂಬಾ ಒಳ್ಳೆಯದು. ಇದು ಕಿಣ್ವ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಹಾಗಾಗಿ ವಿಟಮಿನ್ ಇ ಸಮೃದ್ಧವಾಗಿರುವ ಎಳ್ಳು, ವಾಲ್ನಟ್ಸ್, ಬಾದಾಮಿ ಮತ್ತು ಸೂರ್ಯಕಾಂತಿ ಬೀಜಗಳನ್ನು ಸೇವಿಸಿ.
*ಹೂಕೋಸು: ಇದರಲ್ಲಿ ವಿಟಮಿನ್ ಕೆ ಸಮೃದ್ಧವಾಗಿದೆ. ಇದು ರಕ್ತಪರಿಚಲನೆಯನ್ನು ಹೆಚ್ಚಿಸುವುದರ ಮೂಲಕ ಚರ್ಮ ಸಮಸ್ಯೆಯನ್ನು ನಿವಾರಿಸುತ್ತದೆ.