alex Certify ಸಪೋಟಾ ಸೇವಿಸುವುದರಿಂದ ಇದೆ ಇಷ್ಟೆಲ್ಲಾ ಆರೋಗ್ಯಕರ ಲಾಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಪೋಟಾ ಸೇವಿಸುವುದರಿಂದ ಇದೆ ಇಷ್ಟೆಲ್ಲಾ ಆರೋಗ್ಯಕರ ಲಾಭ

ಚಿಕ್ಕು ಹಣ್ಣು ತುಂಬಾ ಸಿಹಿಯಾದ ಹಣ್ಣು. ಇದು ಹಲವು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದನ್ನು ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನವನ್ನು ಪಡೆಯಬಹುದು. ಅವು ಯಾವುವು ಎಂಬುದನ್ನು ತಿಳಿದುಕೊಳ್ಳೋಣ.

*ಚಿಕ್ಕು ಹಣ್ಣಿನಲ್ಲಿರುವ ಪೋಷಕಾಂಶ ಕರುಳಿನ ಸಮಸ್ಯೆಯನ್ನು ನಿವಾರಿಸುತ್ತದೆ. ಇದು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು, ಹೊಟ್ಟೆಯ ಸಮಸ್ಯೆಯನ್ನು ನಿವಾರಿಸುತ್ತದೆ. ಇದರಲ್ಲಿ ಫೈಬರ್ ಅತ್ಯಧಿಕವಾಗಿರುವುದರಿಂದ ಜೀರ್ಣಕ್ರಿಯೆ ಸಮಸ್ಯೆ, ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತದೆ.

*ಚಿಕ್ಕು ಹಣ್ಣಿನಲ್ಲಿ ಕ್ಯಾಲ್ಸಿಯಂ, ರಂಜಕ, ತಾಮ್ರ , ಕಬ್ಬಿಣಾಂಶ ಅಧಿಕವಾಗಿದ್ದು, ಇದನ್ನು ನಿಯಮಿತವಾಗಿ ಸೇವಿಸಿದರೆ ಮೂಳೆಗಳ ಆರೋಗ್ಯವನ್ನು ಕಾಪಾಡಬಹುದು.

*ಇದರಲ್ಲಿ ವಿಟಮಿನ್ ಸಿ ಅಧಿಕವಾಗಿದ್ದು, ಇದು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಇದು ದೇಹದ ಮೇಲಾಗುವ ಬ್ಯಾಕ್ಟೀರಿಯಾ, ವೈರಸ್ ದಾಳಿಯಿಂದ ರಕ್ಷಿಸುತ್ತದೆ.

*ಚಿಕ್ಕು ಕ್ಯಾನ್ಸರ್ ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ. ಇದರಲ್ಲಿ ವಿಟಮಿನ್ ಎ ಮತ್ತು ಬಿ ಸಮೃದ್ಧವಾಗಿದ್ದು, ಶ್ವಾಸಕೋಶ ಮತ್ತು ಬಾಯಿ ಕ್ಯಾನ್ಸರ್ ನಿಂದ ಕಾಪಾಡುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...