ಹುಬ್ಬಳ್ಳಿ : ಬಿಜೆಪಿಯಲ್ಲಿ ಬಹಳಷ್ಟು ಅಸಮಾಧಾನವಿದೆ, ಯಾವಾಗ ಸ್ಫೋಟ ಆಗುತ್ತೋ ಗೊತ್ತಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ‘ವಿಧಾನಪರಿಷತ್ ನಲ್ಲಿ ಜನಪ್ರತಿನಿಧಿಯಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಕಾಂಗ್ರೆಸ್ ಪಕ್ಷ ನನಗೊಂದು ಅವಕಾಶ ಮಾಡಿಕೊಟ್ಟಿದೆ. ನನ್ನ ರಾಜಕೀಯ ಜೀವನದಲ್ಲಿ ಹೊಸ ಅಧ್ಯಾಯ ಶುರುವಾಗುತ್ತಿದೆ’ ಎಂದರು.
ಲೋಕಸಭಾ ಚುನಾವಣೆಯಲ್ಲಿ ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರು ನಾನು ಸಿದ್ದನಿದ್ದೇನೆ. ಬಿಜೆಪಿಯಲ್ಲಿ ಬಹಳಷ್ಟು ಅಸಮಾಧಾನವಿದೆ, ಯಾವಾಗ ಸ್ಫೋಟ ಆಗುತ್ತೋ ಗೊತ್ತಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಒಳ ಒಪ್ಪಂದ ಮಾಡಿಕೊಂಡವರು ಯಾರು? ಅವರ ಹೆಸರನ್ನು ಮೈಸೂರು ಸಂಸದ ಪ್ರತಾಪ್ ಸಿಂಹ ಬಹಿರಂಗ ಪಡಿಸಲಿ ಎಂದಿದ್ದಾರೆ. ರಾಜ್ಯದಲ್ಲಿ ಬಹಳ ಶ್ರಮ ಹಾಕಿ ನಾನು ಪಕ್ಷ ಸಂಘಟನೆ ಮಾಡಿದ್ದೆ. ಆದರೆ ಬಿಜೆಪಿಯವರು ನನಗೆ ಮನ್ನಣೆ ಕೊಡಲಿಲ್ಲ. ಒಂದು ರಾಷ್ಟ್ರೀಯ ಪಕ್ಷ ಹೇಗಿರಬೇಕು ಎಂಬುದನ್ನು ಕಾಂಗ್ರೆಸ್ ನೋಡಿ ಕಲಿಯಲಿ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.