alex Certify ‘ಮುಡಾ’ ಪ್ರಕರಣದಲ್ಲಿ ನನ್ನ ಮೇಲೆ ಯಾವ ಕಪ್ಪು ಮಸಿಯೂ ಇಲ್ಲ ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮುಡಾ’ ಪ್ರಕರಣದಲ್ಲಿ ನನ್ನ ಮೇಲೆ ಯಾವ ಕಪ್ಪು ಮಸಿಯೂ ಇಲ್ಲ ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ.!

ಮೈಸೂರು : ಮುಡಾ ಪ್ರಕರಣದಲ್ಲಿ ನನ್ನ ಮೇಲೆ ಯಾವ ಕಪ್ಪು ಮಸಿಯೂ ಇಲ್ಲ. ಈ ಬಗ್ಗೆ ನ್ಯಾಯಾಂಗ ತನಿಖಾ ಆಯೋಗ ರಚನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಮುಡಾ ಪ್ರಕರಣದಲ್ಲಿ ನನ್ನ ಮೇಲೆ ಯಾವ ಕಪ್ಪು ಮಸಿಯೂ ಇಲ್ಲ. ಈ ಬಗ್ಗೆ ನ್ಯಾಯಾಂಗ ತನಿಖಾ ಆಯೋಗ ರಚನೆಯಾಗಿದೆ. ಹಿಂದೆ ಬಿಜೆಪಿ ಯಾವುದಾದರೂ ಹಗರಣದ ತನಿಖೆಗೆ ನ್ಯಾಯಾಂಗ ಸಮಿತಿ ರಚಿಸಿತ್ತೆ? ಕೋವಿಡ್-19 ಸಂದರ್ಭದಲ್ಲಿ 3 ರಿಂದ 4 ಸಾವಿರ ಕೋಟಿ ರೂಪಾಯಿ ನುಂಗಿ ಹಾಕಿದ್ದಾರೆ. ನ್ಯಾಯಾಂಗ ತನಿಖೆ ಅಥವಾ ಸಿಬಿಐ ಗೆ ವಹಿಸಲು ಕೊಡಿ ಎಂದು ಒತ್ತಾಯಿಸಿದ್ದೆ. ಆದರೆ ಅವರು ಕೊಡಲಿಲ್ಲ. ನನ್ನಿಂದ ಯಾವುದೇ ತಪ್ಪಿಲ್ಲದಿದ್ದರೂ ಕೂಡ ಜನರ ಮನಸ್ಸಿನಲ್ಲಿ ಅನುಮಾನವಿರಬಾರದು ಎಂಬ ಕಾರಣಕ್ಕೆ ನ್ಯಾಯಾಂಗ ಆಯೋಗ ರಚಿಸಲಾಗಿದೆ.

ನಾನು ತಪ್ಪು ಮಾಡಿದ್ದರೆ ನನಗೆ ಬೇಸರವಾಗುತ್ತಿತ್ತು. ನಾನು ತಪ್ಪು ಮಾಡಿಲ್ಲ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ, ಬ್ಲಾಕ್ ಮೇಲ್ ಮಾಡುವುದರಲ್ಲಿ ನಿಸ್ಸೀಮರು. ಅವರಿಗೆ ಯಾವ ಸಿದ್ಧಾಂತವಿದೆ? ಸಾಮಾಜಿಕ ನ್ಯಾಯ, ಜಾತ್ಯತೀತತೆ, ಪ್ರಜಾಪ್ರಭುತ್ವ, ಸಂವಿಧಾನದ ವಿರುದ್ಧವಾಗಿದ್ದಾರೆ. ಬಹಳ ಮಾತನಾಡುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು 1984 ರಲ್ಲಿ ಕೈಗಾರಿಕಾ ನಿವೇಶನವನ್ನು ಪಡೆದರು. ಸ್ವಾದೀನಕ್ಕೆ ಕೂಡ ಪಡೆದಿದ್ದಾರೆ. ನಂತರ ಬದಲಿ ನಿವೇಶನಕ್ಕೆ ಅರ್ಜಿ ಹಾಕಿಕೊಂಡಿದ್ದಾರೆ. ಕೈಗಾರಿಕೆ ಮಾಡಿದ್ದಾರೆಯೇ? ಪುಟ್ಟಯ್ಯ ಇರುವಾಗ ಎಷ್ಟು ನಿವೇಶನಗಳು ದೇವೇಗೌಡರ ಕುಟುಂಬಕ್ಕೆ ಹೋಗಿದೆ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...