ಬೆಂಗಳೂರು : 141 ಸಂಸದರನ್ನು ಒಂದೇ ಬಾರಿಗೆ ಅಮಾನತು ಮಾಡಿದ ಉದಾಹರಣೆ ಸಂಸತ್ತಿನ ಇತಿಹಾಸದಲ್ಲೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.
ಸಂಸತ್ ನಲ್ಲಿ ಸಂಸದರನ್ನು ಅಮಾನತು ಮಾಡಿದ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು. 141 ಸಂಸದರನ್ನು ಒಂದೇ ಬಾರಿಗೆ ಅಮಾನತ್ತು ಮಾಡಿದ ಉದಾಹರಣೆ ಸಂಸತ್ತಿನ ಇತಿಹಾದಲ್ಲೇ ಇಲ್ಲ. ಇಷ್ಟು ಮಂದಿ ಸಂಸದರನ್ನು ಅಮಾನತ್ತು ಮಾಡಿರುವುದು ಸರ್ವಾಧಿಕಾರವನ್ನೂ ಮೀರಿದ ಕ್ರಮ. ಇದನ್ನು ಪ್ರಜಾಪ್ರಭುತ್ವ ಅಂತ ಕರೆಯಲು ಸಾಧ್ಯವಿಲ್ಲ. ಚರ್ಚೆ ಪ್ರಜಾಪ್ರಭುತ್ವದ ಮೂಲ. ಒಳ್ಳೆಯ ಸರ್ಕಾರ, ಬಲಿಷ್ಠ ವಿರೋಧ ಪಕ್ಷ ಇದ್ದಾಗ ಮಾತ್ರ ಪ್ರಜಾಪ್ರಭುತ್ವದ ಯಶಸ್ಸು ಸಾಧ್ಯ ಎಂದರು.
ಸಂಸತ್ತಿನಲ್ಲಿ ಸರ್ಕಾರದ ತಪ್ಪುಗಳನ್ನು ವ್ಯಕ್ತಪಡಿಸುವ ಆರೋಗ್ಯಪೂರ್ಣ ವಾತಾವರಣ ಇರಬೇಕು. ಬಿಜೆಪಿಯ ಪಕ್ಷದ MP ಗಳನ್ನು ಮಾತ್ರ ಇಟ್ಟುಕೊಂಡು ಸಂಸತ್ ಅಧಿವೇಶನ ನಡೆಸುವುದು ನಾಚಿಕೆಗೇಡು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.