ಬೆಂಗಳೂರು : ‘ಯುವನಿಧಿ’ ಯೋಜನೆ ನೋಂದಣಿಗೆ ಯಾವುದೇ ಶುಲ್ಕ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ‘ನಲ್ಲಿ ಇಂದು ಮುಖ್ಯಮಂತ್ರಿಗಳೊಂದಿಗೆ “ಯುವನಿಧಿ” ಗ್ಯಾರಂಟಿಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿ ನಂತರ ಮಾತನಾಡಿದರು.
ನುಡಿದಂತೆ ನಡೆದ ನಮ್ಮ ಸರ್ಕಾರ ಈಗಾಗಲೇ 4 ಗ್ಯಾರಂಟಿಗಳನ್ನು ಜಾರಿ ಮಾಡಿದ್ದು, ಇಂದು 5ನೇ ಗ್ಯಾರಂಟಿಯನ್ನು ಜಾರಿ ಮಾಡಿದ್ದೇವೆ. ಯುವನಿಧಿ ದೇಶದಲ್ಲೇ ವಿಶೇಷ ಕಾರ್ಯಕ್ರಮವಾಗಿದ್ದು, ನಿರುದ್ಯೋಗಿ ಪದವೀಧರರ ಶ್ರೇಯೋಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಸೇರಿದಂತೆ ಇತರೆ ಸೇವಾ ಕೇಂದ್ರಗಳಲ್ಲಿ ಯುವನಿಧಿ ಗ್ಯಾರಂಟಿಗಾಗಿ ನೋಂದಣಿ ಮಾಡಿಕೊಳ್ಳಬಹುದು. ನೋಂದಣಿ ಮಾಡಿಕೊಳ್ಳಲು ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಭರಿಸಬೇಕಾದ ಅಗತ್ಯ ಇಲ್ಲ ಎಂದು ತಿಳಿಸಿದರು.