ಬೆಂಗಳೂರು : ಸದ್ಯಕ್ಕೆ ‘ಕರ್ನಾಟಕ ಬಂದ್’ ಅವಶ್ಯಕತೆ ಇಲ್ಲ, ಇದಕ್ಕೆಲ್ಲಾ ನಾವು ಉತ್ತೇಜನ ನೀಡಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಮಾ.22 ರಂದು ಕನ್ನಡ ಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದೆ, ಆದರೆ ಎಸ್ ಎಸ್ ಎಲ್ ಸಿ ಪರೀಕ್ಷೆ ಕೂಡ ಇರುವುದರಿಂದ ಮಕ್ಕಳಿಗೆ ತೊಂದರೆಯಾಗಲಿದೆ. ಈ ರೀತಿ ಬಂದ್ ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಕರ್ನಾಟಕ ಬಂದ್ ಬಗ್ಗೆ ಸಂಜೆ ಅಧಿಕಾರಿಗಳ ಜೊತೆ ಮಾತನಾಡುತ್ತೇನೆ ಎಂದು ಅವರು ಹೇಳಿದರು.