ಬೆಂಗಳೂರು : ದೇವಸ್ಥಾನದ ಜಾಗ ಖಾಸಗಿಯವರಿಗೆ ಮಾರಾಟ ಮಾಡಲು ಅವಕಾಶವಿಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನದ ಜಮೀನನನ್ನು ಖಾಸಗಿಯವರಿಗೆ ಮಾರಾಟ ಮಾಡಲು ಅವಕಾಶ ಇರುವುದಿಲ್ಲ ಎಂದು ಮುಜರಾಯಿ ಸಚಿವರಾದ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಪೂರ್ಣ
ರಾಜ್ಯದಲ್ಲಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿಗಳ ಪೈಕಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸದೆ ಇರುವ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.