ಚಿಕ್ಕಮಗಳೂರು : ಕೊರೊನಾ ಬಗ್ಗೆ ಆತಂಕದ ಸ್ಥಿತಿ ಇನ್ನೂ ಬಂದಿಲ್ಲ , ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್ ‘ ಜನರು ಕೊರೊನಾ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಹೊಸ ವರ್ಷಾಚರಣೆಗೆ ಕಠಿಣ ಕ್ರಮ ತೆಗೆದುಕೊಳ್ಳುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಆಗಿಲ್ಲ, ಅಧಿಕಾರಿಗಳ ಜೊತೆ ಸಭೆ ಕರೆದಿದ್ದೇವೆ, ಆರೋಗ್ಯ ಇಲಾಖೆ ಸಭೆ ನಡೆಸಿ ತೀರ್ಮಾನ ಮಾಡುತ್ತದೆ ಎಂದಿದ್ದಾರೆ.
ಜೊತೆ ಚರ್ಚಿಸಿ ಈ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು.
ರಾಜ್ಯದಲ್ಲಿ ಸದ್ಯಕ್ಕೆ ಕೊರೊನಾ ಆತಂಕದ ಯಾವುದೇ ಲಕ್ಷಣಗಳು ಇಲ್ಲ, ಯಾವುದೇ ಹೊಸ ತಳಿ ಪತ್ತೆಯಾಗಿಲ್ಲ, ಆತಂಕ ಬೇಡ ಎಂದರು.