ಶಿವಮೊಗ್ಗ: ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಇದೆ. ಸರ್ಕಾರದ ಮಂತ್ರಿಗಳ ಮೇಲೆ ನಿರಂತರ ಭ್ರಷ್ಟಾಚಾರದ ಆರೋಪ ಕೇಳಿ ಬರುತ್ತಿದೆ. ತನಿಖೆಗಳ ಮೂಲಕ ಭ್ರಷ್ಟಾಚಾರದ ಆರೋಪಗಳು ಹೊರ ಬರಬೇಕು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿ ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ತನಿಖೆಗೆ ಆದೇಶಿಸಿದ್ದಾರೆ.ಮುಂದೆ ಏನು ಆಗುತ್ತದೆ ಎಂಬುದು ಕಾದು ನೋಡೋಣ. ಸಚಿವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಹೇಳಿದ್ದಾರೆ.
ಶೀಘ್ರವೇ ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಆಕಾಂಕ್ಷಿಗಳ ಪಟ್ಟಿ ತಯಾರಿಸಲಾಗುತ್ತದೆ. ಹಿಂದಿನ ಚುನಾವಣೆಯಂತೆ ಈ ಬಾರಿ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದರು.