
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ನಗರದ ಬೈಪಾಸ್ ರಸ್ತೆಯ ಬಳಿ ಪತಿಯ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಕಳ್ಳರು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಭದ್ರಾವತಿ ತಾಲೂಕಿನ ಹಿರಿಯೂರು ಗ್ರಾಮದ ಹನುಮಂತೇಗೌಡ ಅವರು ತಮ್ಮ ಪತ್ನಿ ಭಾಗ್ಯಮ್ಮ ಅವರೊಂದಿಗೆ ಬೈಕ್ ನಲ್ಲಿ ಜಿಂಕ್ ಲೈನ್ ಮಾದೇಶ್ವರ ದೇವಸ್ಥಾನದ ರಸ್ತೆಯ ಬಳಿ ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ದುಷ್ಕರ್ಮಿಗಳು ಕೃತ್ಯವೆಸಗಿದ್ದಾರೆ.
ಬೈಕ್ ನಲ್ಲಿ ಬಂದ ಇಬ್ಬರು ಭಾಗ್ಯಮ್ಮ ಅವರ ಕುತ್ತಿಗೆಗೆ ಕೈಹಾಕಿ 1.75 ಲಕ್ಷ ರೂ. ಮೌಲ್ಯದ 35 ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ. ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.