ಇತ್ತೀಚಿಗಷ್ಟೇ ನಡೆದ ಎರಡು ಟಿ-20 ಪಂದ್ಯಗಳಲ್ಲಿ ಯುವ ಭಾರತ ತಂಡ ಇಂಗ್ಲೆಂಡ್ ಎದುರು ಜಯಭೇರಿ ಆಗುವ ಮೂಲಕ 2-0 ಇಂದ ಮುನ್ನಡೆ ಸಾಧಿಸಿದೆ. ಕಳೆದ ಪಂದ್ಯದ ತಿಲಕ್ ವರ್ಮ ಅವರ ಸ್ಪೋಟಕ ಬ್ಯಾಟಿಂಗ್ ಪ್ರೇಕ್ಷಕರನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿತ್ತು.
ನಾಳೆ ರಾಜ್ ಕೋಟ್ ನಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವೆ ಮೂರನೇ ಟಿ ಟ್ವೆಂಟಿ ಪಂದ್ಯ ನಡೆಯುತ್ತಿದ್ದು, ಇಂಗ್ಲೆಂಡ್ ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.
ಈಗಾಗಲೇ 2 ಟಿ ಟ್ವೆಂಟಿ ಪಂದ್ಯಗಳಲ್ಲಿ ಜಯ ಕಂಡಿರುವ ಭಾರತ ತಂಡ ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದ್ದು, ಎರಡು ಬಲಿಷ್ಠ ತಂಡಗಳ ಜಿದ್ದಾಜಿದ್ದಿ ಹೋರಾಟ ನೋಡಲು ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ.