alex Certify ಮೂರನೇ ಅಲೆ ಆತಂಕದ ಹೊತ್ತಲ್ಲೇ ಮಹತ್ವದ ಮಾಹಿತಿ: ಮುಂದಿನ 100 ದಿನ ನಿರ್ಣಾಯಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೂರನೇ ಅಲೆ ಆತಂಕದ ಹೊತ್ತಲ್ಲೇ ಮಹತ್ವದ ಮಾಹಿತಿ: ಮುಂದಿನ 100 ದಿನ ನಿರ್ಣಾಯಕ

ನವದೆಹಲಿ: ದೇಶಕ್ಕೆ ಮುಂದಿನ 100 ದಿನಗಳು ನಿರ್ಣಾಯಕವಾಗಿವೆ ಎಂದು ಸರ್ಕಾರ ಹೇಳಿದೆ. ದೇಶದಲ್ಲಿ ಕೋರೋನಾ ಸೋಂಕಿನ ಪ್ರಕರಣಗಳು ನಿಧಾನಗತಿಯಲ್ಲಿ ಕಡಿಮೆಯಾಗುತ್ತಿದ್ದು, ಮೂರನೆಯ ಸೂಚನೆಯಾಗಿರಬಹುದು ಎಂದು ಹೇಳಲಾಗಿದೆ.

ಕೊರೋನಾ ವಿರುದ್ಧದ ಹೋರಾಟದಲ್ಲಿ ಮುಂದಿನ 100 ದಿನಗಳು ನಿರ್ಣಾಯಕವಾಗಿವೆ. ಇನ್ನೂ ಮೂರ್ನಾಲ್ಕು ತಿಂಗಳು ನಿರ್ಣಾಯಕವಾಗಲಿದೆ ಎಂದು ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದೆ.

ಮೂರನೆಯ ಅಲೆ ಅಪ್ಪಳಿಸುವುದು ಜನರ ವರ್ತನೆ ಮತ್ತು ಲಸಿಕೆ ಹಾಕಿಸಿಕೊಂಡವರ ಸಂಖ್ಯೆಯನ್ನು ಅವಲಂಬಿಸಿರುತ್ತದೆ ಎಂದು ಆರೋಗ್ಯ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಲವ ಅಗರವಾಲ್ ಹೇಳಿದ್ದಾರೆ.

ಈ ವರ್ಷ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಎರಡನೆಯ ಅಲೆ ಭಾರಿ ಹೆಚ್ಚಾಗಿ ದಾಖಲೆ ಸಂಖ್ಯೆಯ ಕೊರೊನಾ ಪ್ರಕರಣ ಮತ್ತು ಸಾವಿನ ಸಂಖ್ಯೆ ಕಂಡುಬಂದಿತ್ತು. ನಿರ್ಬಂಧಗಳ ಸಡಿಲಿಕೆ ನಂತರ ಜನ ಮಾಸ್ಕ್ ಧರಿಸದೆ ನಿಯಮಗಳನ್ನು ಪಾಲಿಸದೆ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ತಿರುಗಾಡುತ್ತಿದ್ದಾರೆ. ಆಗಸ್ಟ್ ನಂತರದಲ್ಲಿ ಕೊರೋನಾ ಮೂರನೆಯ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...