ನವದೆಹಲಿ: ಸರ್ಕಾರಿ ಇಲಾಖೆಗಳಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ. ಹೀಗಿದ್ದರೂ ಕೇವಲ 75,000 ನೇಮಕಾತಿ ಪತ್ರ ವಿತರಿಸಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಒದಗಿಸುವುದಾಗಿ ಭರವಸೆ ನೀಡಿದ್ದರು. ಹಾಗಿದ್ದರೆ ಕಳೆದ ಎಂಟು ವರ್ಷದಲ್ಲಿ 16 ಕೋಟಿ ಉದ್ಯೋಗ ಸೃಷ್ಟಿ ಆಗಬೇಕಿತ್ತು. ಈಗ ವಿವಿಧ ಸರ್ಕಾರಿ ಇಲಾಖೆಗಳಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇದ್ದು, 75,000 ಜನರಿಗೆ ಮಾತ್ರ ಉದ್ಯೋಗ ಪತ್ರ ವಿತರಿಸಲಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಕೇಂದ್ರ ಸಚಿವಾಲಯದ ಸೇವೆಗಳಲ್ಲಿ 1600 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಏಕೆ ಭರ್ತಿ ಮಾಡಿಲ್ಲವೆಂದು ಪ್ರಶ್ನಿಸಿದ್ದಾರೆ.