ಹಾಲು ನಿಮ್ಮ ಚರ್ಮಕ್ಕೆ ಹಲವಾರು ಪ್ರಯೋಜನವನ್ನು ನೀಡುತ್ತದೆ. ಇದು ನಿಮ್ಮ ಚರ್ಮದಲ್ಲಿರುವ ಸತ್ತ ಜೀವಕೋಶಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ, ಸುಕ್ಕುಗಳ ವಿರುದ್ಧ ಹೋರಾಡುತ್ತದೆ. ಬಿಸಿಲಿನಿಂದಾದ ಚರ್ಮದ ಉರಿಯನ್ನು ಕಡಿಮೆ ಮಾಡುತ್ತದೆ. ಹಾಗಾಗಿ ಚರ್ಮಕ್ಕಾಗಿ ಈ ಹಾಲಿನ ಫೇಸ್ ಪ್ಯಾಕ್ ಬಳಸಿ.
* ಹಸಿ ಹಾಲು, ಕಡಲೆಹಿಟ್ಟಿಗೆ 1 ಚಿಟಿಕೆ ಅರಶಿನ ಮತ್ತು 1 ಚಮಚ ಜೇನುತುಪ್ಪವನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ. 15 ನಿಮಿಷ ಬಿಟ್ಟು ವಾಶ್ ಮಾಡಿ ಇದು ನಿಮ್ಮ ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ.
*1 ಚಮಚ ಹಸಿ ಹಾಲಿಗೆ ½ ಚಮಚ ಜೇನುತುಪ್ಪ ಮತ್ತು ನಿಂಬೆ ರಸವನ್ನು ಬೆರೆಸಿದಾಗ ಅದು ನೈಸರ್ಗಿಕ ಬ್ಲೀಚ್ ಆಗಿ ಕಾರ್ಯ ನಿರ್ವಹಿಸುತ್ತದೆ. ಇದನ್ನು ಮುಖಕ್ಕೆ ಹಚ್ಚಿ 10 ನಿಮಿಷ ಬಿಟ್ಟು ವಾಶ್ ಮಾಡಿ.
*1 ಚಮಚ ಮುಲ್ತಾನಿ ಮಿಟ್ಟಿಗೆ ½ ಚಮಚ ಹಾಲು ಮಿಕ್ಸ್ ಮಾಡಿ ಪೇಸ್ಟ್ ತಯಾರಿಸಿ ಇದನ್ನು ಮುಖಕ್ಕೆ ಹಚ್ಚಿ 20 ನಿಮಿಷ ಬಿಟ್ಟು ವಾಶ್ ಮಾಡಿ. ಇದನ್ನು ವಾರಕ್ಕೆ 2 ಬಾರಿ ಮಾಡಿ.
*1 ಚಮಚ ಶ್ರೀಗಂಧ ಮತ್ತು ½ ಚಮಚ ಹಾಲು ಮಿಕ್ಸ್ ಮಾಡಿ ಪೇಸ್ಟ್ ತಯಾರಿಸಿ ಇದನ್ನು ಮುಖಕ್ಕೆ ಹಚ್ಚಿ 15 ನಿಮಿಷ ಬಿಟ್ಟು ವಾಶ್ ಮಾಡಿ.
*1 ಚಮಚ ಓಟ್ ಮೀಲ್ ಗೆ ಹಾಲನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ 10 ನಿಮಿಷ ಬಿಟ್ಟು ವಾಶ್ ಮಾಡಿ.