ಸೂರ್ಯಕಾಂತಿ ಬೀಜಗಳು ಆರೋಗ್ಯಕ್ಕೆ ತುಂಬಾ ಉತ್ತಮವಾಗಿದೆ. ಇದರಲ್ಲಿ ವಿಟಮಿನ್ ಇ, ಆಂಟಿ ಆಕ್ಸಿಡೆಂಟ್, ಪ್ರೋಟಿನ್, ಫೈಬರ್ ಸೇರಿದಂತೆ ಅಗತ್ಯವಾದ ಪೋಷಕಾಂಶಗಳು ಕಂಡುಬರುತ್ತದೆ. ಹಾಗಾಗಿ ಇದು ನಮ್ಮ ಆರೋಗ್ಯಕ್ಕೆ ಬಹಳ ಉತ್ತಮ. ಇದಲ್ಲದೇ ಚಳಿಗಾಲದಲ್ಲಿ ಇದನ್ನು ಸೇವಿಸಿದರೆ ಹಲವು ಪ್ರಯೋಜನಗಳನ್ನು ಪಡೆಯಬಹುದು.
*ಸೂರ್ಯಕಾಂತಿ ಬೀಜಗಳಲ್ಲಿ ವಿಟಮಿನ್ ಇ ಸಾಕಷ್ಟು ಪ್ರಮಾಣದಲ್ಲಿದೆ. ಇದು ಚರ್ಮ ಹಾಗೂ ಕೂದಲಿಗೆ ಒಳ್ಳೆಯದು. ಹಾಗೇ ಕೆಮ್ಮು ಮತ್ತು ಶೀತದ ಸಮಸ್ಯೆಗಳು ನಿವಾರಣೆಯಾಗುತ್ತದೆ.
*ಇದು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುತ್ತದೆ. ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
*ಸೂರ್ಯಕಾಂತಿ ಬೀಜದಲ್ಲಿರುವ ಪೋಷಕಾಂಶಗಳು ಚರ್ಮಕ್ಕೆ ತುಂಬಾ ಉತ್ತಮ. ಇದರಿಂದ ಹೊಳೆಯುವ ಚರ್ಮವನ್ನು ಪಡೆಯಬಹುದು. ಮೊಡವೆಗಳು ಮತ್ತು ಗುಳ್ಳೆಗಳ ಸಮಸ್ಯೆಯನ್ನು ದೂರಮಾಡುತ್ತದೆ.
*ಇದರಲ್ಲಿ ಪೈಬರ್ ಅಧಿಕವಾಗಿರುವುದರಿಂದ ಹೊಟ್ಟೆಯ ಆರೋಗ್ಯವನ್ನು ಕಾಪಾಡುತ್ತದೆ, ಆಹಾರದ ಜೀರ್ಣಕ್ರಿಯೆಯನ್ನು ಸರಾಗಗೊಳಿಸುತ್ತದೆ. ಅತಿಯಾದ ಹಸಿವನ್ನು ಕಡಿಮೆ ಮಾಡಿ ತೂಕ ಹೆಚ್ಚಾಗುವುದನ್ನುತಡೆಯುತ್ತದೆ.
*ಸೂರ್ಯಕಾಂತಿ ಬೀಜದಲ್ಲಿರುವ ವಿಟಮಿನ್ ಬಿ1 ನಮ್ಮ ದೇಹದಲ್ಲಿ ಹೆಚ್ಚಿನ ಶಕ್ತಿಯನ್ನು ಉತ್ಪಾದಿಸಲು ಸಹಾಯ ಮಾಡುತ್ತದೆ.