alex Certify ‘ಕರಿಬೇವಿ’ನಲ್ಲಿದೆ ಈ ಆರೋಗ್ಯ ಭಾಗ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕರಿಬೇವಿ’ನಲ್ಲಿದೆ ಈ ಆರೋಗ್ಯ ಭಾಗ್ಯ

ಕರಿಬೇವನ್ನು ನಾವು ಅಡುಗೆಯ ಪರಿಮಳ ಹೆಚ್ಚಿಸಲು ಬಳಸುತ್ತೇವೆ. ಇದು ಕಬ್ಬಿಣ, ಕ್ಯಾಲ್ಸಿಯಂ, ಫಾಸ್ಪರಸ್ ಮತ್ತು ಹಲವು ಬಗೆಯ ಜೀವಸತ್ವಗಳಿವೆ. ಹಾಗಾಗಿ ಇದು ಆರೋಗ್ಯಕ್ಕೆ ತುಂಬಾ ಉತ್ತಮವಾಗಿದೆ. ಇದನ್ನು ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

*ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದರಲ್ಲಿರುವ ಫೈಬರ್ ಅಂಶವು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ದಿನಕ್ಕೆ 4-5 ಕರಿಬೇವಿನ ಎಲೆಗಳನ್ನು ಅಗೆಯುವುದರಿಂದ ತೂಕವನ್ನು ಇಳಿಸಿಕೊಳ್ಳಬಹುದು.

*ಇದು ಬ್ಯಾಕ್ಟೀರಿಯಾ ವಿರೋಧಿ. ಇದು ರೋಗಗಳನ್ನು ತಡೆಯಲು ಸಹಕಾರಿ. ಕ್ಯಾನ್ಸರ್ ತಡೆಯುವಲ್ಲಿ ಇದು ಸಹಕರಿಸುತ್ತದೆ.

*ಇದು ದೇಹದಲ್ಲಿರುವ ವಿಷಕಾರಿ ಅಂಶವನ್ನು ಹೊರಹಾಕುತ್ತದೆ. ಇದು ಲಿವರ್ ಮತ್ತು ಇತರ ಜೀರ್ಣಕಾರಿ ಅಂಗಗಳ ಆರೋಗ್ಯವನ್ನು ಕಾಪಾಡುತ್ತದೆ.

*ಇದರಲ್ಲಿ ವಿಟಮಿನ್ ಎ ಸಮೃದ್ಧವಾಗಿದೆ. ಇದು ಕಣ್ಣಿನ ಆರೋಗ್ಯವನ್ನು ಕಾಪಾಡುತ್ತದೆ. ಇದು ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಿ ರಕ್ತಪರಿಚಲನೆಯನ್ನು ಹೆಚ್ಚಿಸುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...