ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡಿಸಿದ್ದು, ಬಜೆಟ್ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ.
ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಕುರಿತು ಮಾತನಾಡಿರುವ ಪ್ರಧಾನಿ ಮೋದಿ ಅವರು, ಬಜೆಟ್ ನಲ್ಲಿ ಎರಡು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಇದು ದೇಶದ ಭವಿಷ್ಯವನ್ನು ನಿರ್ಮಿಸುವ ಬಜೆಟ್. ಈ ಬಜೆಟ್ ನಂಬಿಕೆಯನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ.
ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ತಂಡಕ್ಕೆ ಧನ್ಯವಾದ ಸಲ್ಲಿಸುತ್ತೇನೆ. ಆಯುಷ್ಮಾನ್ ಭಾರತ್ ಯೋಜನೆಯನ್ನು ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ವಿಸ್ತರಿಸಲಾಗಿದೆ. ಒಂದು ಕೋಟಿ ಕುಟುಂಬಗಳಿಗೆ ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.