alex Certify BIG NEWS: ಕೊನೆ ಹಂತದ ಮತದಾನ ಮುಗಿಯುವ ಮೊದಲೇ ಬಿಹಾರ ಸಿಎಂ ನಿತೀಶ್ ಕುಮಾರ್ ಅಚ್ಚರಿ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊನೆ ಹಂತದ ಮತದಾನ ಮುಗಿಯುವ ಮೊದಲೇ ಬಿಹಾರ ಸಿಎಂ ನಿತೀಶ್ ಕುಮಾರ್ ಅಚ್ಚರಿ ನಿರ್ಧಾರ

ಪಾಟ್ನಾ: ದೇಶದ ಗಮನ ಸೆಳೆದ ಬಿಹಾರ ವಿಧಾನಸಭೆ ಚುನಾವಣೆಯ ಮೂರನೇ ಮತ್ತು ಕೊನೆಯ ಹಂತದ ಮತದಾನ ನವೆಂಬರ್ 7 ರಂದು ನಡೆಯಲಿದೆ.

ಪ್ರಚಾರದ ಕೊನೆಯ ದಿನವಾದ ಇಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಚ್ಚರಿಯ ನಿರ್ಧಾರ ಪ್ರಕಟಿಸಿದ್ದು, ಈ ವಿಧಾನಸಭೆ ಚುನಾವಣೆಯೇ ನನ್ನ ಕೊನೆಯ ಚುನಾವಣೆ ಎಂದು ತಿಳಿಸಿದ್ದಾರೆ. ಪೂರ್ಣಿಯಾ ಜಿಲ್ಲೆಯಲ್ಲಿ ನಡೆದ ರಾಜಕೀಯ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಪ್ರಸ್ತುತ ನಡೆಯುತ್ತಿರುವ ಚುನಾವಣೆಯೇ ನನ್ನ ಕೊನೆಯ ಚುನಾವಣೆಯಾಗಿದೆ ಎಂದು ತಿಳಿಸಿದ್ದಾರೆ.

ಬಿಹಾರ ಸಿಎಂ ನಿತೀಶ್ ಕುಮಾರ್ ನಾಲ್ಕನೇ ಅವಧಿಗೆ ಅಧಿಕಾರ ಹಿಡಿಯಲು ಪ್ರಯತ್ನ ನಡೆಸಿದ್ದಾರೆ. ಆದರೆ ಆರ್.ಜೆ.ಡಿ. ಮತ್ತು ಎಲ್.ಜೆ.ಪಿ.ಯಿಂದ ತೀವ್ರ ಪೈಪೋಟಿ ಎದುರಾಗಿದೆ. ನವೆಂಬರ್ 7 ರಂದು ಮೂರನೇ ಹಂತದ ಮತದಾನ ನಡೆಯಲಿದ್ದು, ನವೆಂಬರ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...