IPL ಇತಿಹಾಸದಲ್ಲೇ ಇದೇ ಮೊದಲು ಎಂಬಂತೆ ಆಸ್ಟ್ರೇಲಿಯಾದ ವಿಶ್ವಕಪ್ ವಿಜೇತ ನಾಯಕ ‘ಪ್ಯಾಟ್ ಕಮ್ಮಿನ್ಸ್’ ದಾಖಲೆ ಮೊತ್ತಕ್ಕೆ ಸೇಲ್ ಆಗಿದ್ದಾರೆ.
ಆಸ್ಟ್ರೇಲಿಯಾದ ವಿಶ್ವಕಪ್ ವಿಜೇತ ನಾಯಕ ಪ್ಯಾಟ್ ಕಮಿನ್ಸ್ ಅವರನ್ನ ಸನ್ ರೈಸರ್ಸ್ ಹೈದರಾಬಾದ್ 20.50 ಕೋಟಿ ರೂ.ಗೆ ಖರೀದಿಸಿದೆ. ಪ್ಯಾಟ್ ಕಮಿನ್ಸ್ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಆಟಗಾರನಾಗಿದ್ದು, 17ನೇ ಆವೃತ್ತಿಯ ಐಪಿಎಲ್ ಆಟಗಾರರ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಮತ್ತು ಮೊದಲ ಬಾರಿಗೆ, ಇದನ್ನು ದುಬೈನಲ್ಲಿ ನಡೆಸಲಾಗುತ್ತಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 2024ರ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ ಬೆಂಗಳೂರು ಮತ್ತು ಹೈದರಾಬಾದ್ ತೀವ್ರ ಪೈಪೋಟಿಯಲ್ಲಿ ಕಡೆಗೂ ಹೈದರಾಬಾದ್ ತಂಡ ಪ್ಯಾಟ್ ಕಮ್ಮಿನ್ಸ್ ರನ್ನು ಐಪಿಎಲ್ ಇತಿಹಾಸದಲ್ಲಿಯೇ 20.50 ಕೋಟಿ ರೂ. ದುಬಾರಿ ಮೊತ್ತಕ್ಕೆ ಖರೀದಿಸಿದೆ.