ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ವಿಶ್ವ ಕಾಫಿ ಸಮ್ಮೇಳನ; ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಂದ ನಾಳೆ ಉದ್ಘಾಟನೆ

Piyush Goyal to visit New York, Washington DC from Jan 9-11 - Lagatar English

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ವಿಶ್ವ ಕಾಫಿ ಸಮ್ಮೇಳನ ನಡೆಯುತ್ತಿದ್ದು, ಸೆಪ್ಟೆಂಬರ್ 25 ರಿಂದ 28 ರ ವರೆಗೆ ಅರಮನೆ ಮೈದಾನದಲ್ಲಿ ನಡೆಯಲಿರುವ ಈ ಕಾಫಿ ಸಮ್ಮೇಳನವನ್ನು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ನಾಳೆ ಉದ್ಘಾಟಿಸಲಿದ್ದಾರೆ.

ಪ್ರತಿ ಐದು ವರ್ಷಕ್ಕೊಮ್ಮೆ ಈ ಸಮ್ಮೇಳನ ನಡೆದುಕೊಂಡು ಬಂದಿದ್ದು, ಈ ಬಾರಿ ಇದರಲ್ಲಿ ಭಾಗವಹಿಸಲು 40,000 ಮಂದಿ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ 80 ದೇಶಗಳಿಂದ 2400 ಕ್ಕೂ ಅಧಿಕ ಪ್ರತಿನಿಧಿಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಸಮ್ಮೇಳನದಲ್ಲಿ ಭಾಗವಹಿಸಲು ಪಾಸ್ ಕಡ್ಡಾಯವಾಗಿದ್ದು, ಇದನ್ನು ಉಚಿತವಾಗಿ ಪಡೆಯಲು ಕಾಫಿ ಶಾಪ್ ಗಳಾದ ಕೆಫೆ ಕಾಫಿ ಡೇ, ಲೆವಿಸ್ಟಾ, ಬರಿಸ್ತಾ ಮೊದಲಾದವುಗಳಿಗೆ ಭೇಟಿ ನೀಡಬೇಕಾಗುತ್ತದೆ. ಆನ್ಲೈನ್ ಮೂಲಕ ಪಾಸ್ ಪಡೆಯಲು https://wccindia2023.com ವೆಬ್ ಸೈಟ್ ಗೆ ಭೇಟಿ ನೀಡಿ ಒಂದು ಸಾವಿರ ರೂಪಾಯಿಗಳನ್ನು ಪಾವತಿಸುವ ಮೂಲಕ ಪಾಸ್ ಪಡೆಯಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read