alex Certify ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವುದರ ಹಿಂದಿದೆ ಈ ಕಾರಣ; ನಿಯಂತ್ರಣಕ್ಕೂ ಇದೆ ಸರಳ ಸೂತ್ರ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವುದರ ಹಿಂದಿದೆ ಈ ಕಾರಣ; ನಿಯಂತ್ರಣಕ್ಕೂ ಇದೆ ಸರಳ ಸೂತ್ರ….!

ಕೆಟ್ಟ ಕೊಲೆಸ್ಟ್ರಾಲ್‌ ಅತ್ಯಂತ ಅಪಾಯಕಾರಿ. ಇದು ದೇಹದಲ್ಲಿ ಹೆಚ್ಚಾದರೆ ಹೃದಯಾಘಾತಕ್ಕೂ ಕಾರಣವಾಗಬಹುದು. ಕೊಲೆಸ್ಟ್ರಾಲ್ ಹೆಚ್ಚಾದಂತೆ ಪಾರ್ಶ್ವವಾಯು ಅಪಾಯವು ಹೆಚ್ಚಾಗುತ್ತದೆ. ಟೈಪ್-2 ಡಯಾಬಿಟೀಸ್‌ಗೂ ಇದು ಕಾರಣವಾಗಬಹುದು. ಇದನ್ನು ನಿಯಂತ್ರಿಸಲು ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಿಸುವ ಅಭ್ಯಾಸಗಳನ್ನು ಬಿಡಬೇಕು.

ಕೆಟ್ಟ ಆಹಾರ ಪದ್ಧತಿ ಮತ್ತು ತಪ್ಪಾದ ಜೀವನಶೈಲಿಯಿಂದ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಲು ಇತರ ಕಾರಣಗಳೂ ಇವೆ.

ದೇಹದಲ್ಲಿ ಸರಿಯಾದ ಕೊಲೆಸ್ಟ್ರಾಲ್ ಮಟ್ಟವನ್ನು ಕಾಪಾಡಿಕೊಳ್ಳಲು  ಆರೋಗ್ಯಕರ ಆಹಾರ ಕ್ರಮವನ್ನು ಅನುಸರಿಸಬೇಕು. ಪ್ಯಾಕ್ ಮಾಡಿದ ತಿಂಡಿಗಳು, ಡೈರಿ ಉತ್ಪನ್ನಗಳು ಮತ್ತು ಮಾಂಸಾಹಾರಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ.

ದೈಹಿಕ ಚಟುವಟಿಕೆಯ ಕೊರತೆ ಕೂಡ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ. ಹಾಗಾಗಿ ನಿಯಮಿತವಾಗಿ ವ್ಯಾಯಾಮ ಮಾಡಬೇಕು. ಇದು ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ.

ಅತಿಯಾಗಿ ಆಲ್ಕೋಹಾಲ್ ಸೇವಿಸುವವರ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಧಿಕವಾಗಿರುತ್ತದೆ. ಇದರಿಂದ ಹೃದಯಕ್ಕೆ ಸಾಕಷ್ಟು ಹಾನಿಯಾಗುತ್ತದೆ. ಸ್ಥೂಲಕಾಯತೆಯು ಅನೇಕ ರೋಗಗಳಿಗೆ ಮೂಲವಾಗಿದೆ. ತೂಕ ವೇಗವಾಗಿ ಹೆಚ್ಚುತ್ತಿದ್ದರೆ ಕೊಲೆಸ್ಟ್ರಾಲ್ ಕೂಡ ಹೆಚ್ಚಾಗುವ ಅಪಾಯವಿದೆ. ಹಾಗಾಗಿ ತೂಕವನ್ನು ನಿಯಂತ್ರಿಸುವುದು ಬಹಳ ಮುಖ್ಯ.

ಹೆಚ್ಚು ಸಿಗರೇಟ್ ಸೇದುವವರಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವ ಅಪಾಯವಿರುತ್ತದೆ. ಇದಲ್ಲದೆ ಹೃದಯಾಘಾತದ ಸಾಧ್ಯತೆಯೂ ಹೆಚ್ಚಾಗುತ್ತದೆ. ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಪ್ರತಿದಿನ ಬೆಳಗ್ಗೆ ಅಥವಾ ರಾತ್ರಿ ಮಲಗುವ ಮುನ್ನ ಬೆಳ್ಳುಳ್ಳಿಯನ್ನು ಸೇವಿಸಿ. ಇದರಿಂದ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರುತ್ತದೆ.

ಪ್ರತಿದಿನ ಗ್ರೀನ್ ಟೀ ಕುಡಿಯುವುದರಿಂದ ಅನೇಕ ಪ್ರಯೋಜನಗಳಿವೆ. ಗ್ರೀನ್‌ ಟೀ ತೂಕವನ್ನು ನಿಯಂತ್ರಿಸುವ ಅನೇಕ ಅಂಶಗಳನ್ನು ಒಳಗೊಂಡಿದೆ. ಅರಿಶಿನ ಬೆರೆಸಿದ ಹಾಲನ್ನು ಕುಡಿಯುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ಈ ಮಿಶ್ರಣ ಕೂಡ ಅಧಿಕ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬಲ್ಲದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...