
ಚಿರಾಗ್ ಬರ್ಜಾತ್ಯಾ ಎಂಬುವವರು ಸಿಹಿತಿಂಡಿಗಳು ತುಂಬಿರುವ ಬಾಕ್ಸ್ ಗಳ ಫೋಟೋವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ದೀಪಾವಳಿಯ ಸಮಯದಲ್ಲೂ ಪಾರ್ಸೆಲ್ ಗಳನ್ನು ತಲುಪಿಸುವ ಡೆಲಿವರಿ ಬಾಯ್ ಗಳಿಗೆ ಸಿಹಿತಿಂಡಿಗಳ ಪ್ಯಾಕ್ ಅನ್ನು ಉಡುಗೊರೆಯಾಗಿ ನೀಡುತ್ತಿದ್ದಾರೆ.
ಈ ಟ್ವೀಟ್ ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ ವೈರಲ್ ಆಗಿದ್ದು, 9,600 ಕ್ಕೂ ಹೆಚ್ಚು ಲೈಕ್‌ಗಳನ್ನು ಸಂಗ್ರಹಿಸಿದೆ. ನೆಟ್ಟಿಗರು ಚಿರಾಗ್ ಅವರ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.