alex Certify ಚರ್ಮದ ತುರಿಕೆಗೆ ಕಾರಣವಾಗುತ್ತೆ ನೀವು ಮಾಡುವ ಈ ತಪ್ಪು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚರ್ಮದ ತುರಿಕೆಗೆ ಕಾರಣವಾಗುತ್ತೆ ನೀವು ಮಾಡುವ ಈ ತಪ್ಪು

ಕೆಲವರ ಚರ್ಮ ತುಂಬಾ ಸೂಕ್ಷ್ಮವಾಗಿರುತ್ತದೆ. ಅಂತವರು ಚರ್ಮದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಇಲ್ಲವಾದರೆ ಚರ್ಮದ ಸಮಸ್ಯೆಗಳು ಕಾಡುತ್ತವೆ. ದದ್ದು, ಅಲರ್ಜಿ, ತುರಿಕೆ ಸಮಸ್ಯೆಗಳು ಉಂಟಾಗುತ್ತದೆ. ಹಾಗಾಗಿ ಅಂತವರು ಈ ಟಿಪ್ಸ್… ಫಾಲೋ ಮಾಡಿ.

*ಬೇಸಿಗೆ ಕಾಲದಲ್ಲಿ ತುಂಬಾ ಬಿಗಿಯಾದ ಬಟ್ಟೆಗಳನ್ನು ಧರಿಸಬೇಡಿ. ಇದರಿಂದ ಅದರಲ್ಲಿರುವ ರಾಸಾಯನಿಕ ವಸ್ತುಗಳು ಚರ್ಮದ ಮೇಲೆ ಪ್ರತಿಕ್ರಿಯಿಸಿ ಚರ್ಮದಲ್ಲಿ ತುರಿಕೆ, ದದ್ದುಗಳಿಗೆ ಕಾರಣವಾಗುತ್ತದೆ. ಹಾಗಾಗಿ ಸಡಿಲವಾದ ಬಟ್ಟೆಗಳನ್ನು, ಕಾಟನ್ ಬಟ್ಟೆಗಳನ್ನು ಧರಿಸಿ.

*ಅತಿಯಾಗಿ ಔಷಧಗಳನ್ನು ಸೇವಿಸುವುದರಿಂದ ಚರ್ಮದಲ್ಲಿ ಅಲರ್ಜಿ ಉಂಟಾಗುತ್ತದೆ. ರಕ್ತದೊತ್ತಡ, ಈಸ್ಟ್ರೋಜನ್, ನೋವು ನಿವಾರಕ, ಕೊಲೆಸ್ಟ್ರಾಲ್ ಗೆ ಸಂಬಂಧಿಸಿದ ಔಷಧಿಗಳು ತುರಿಕೆಗೆ ಕಾರಣವಾಗಬಹುದು. ಹಾಗಾಗಿ ಮನೆಮದ್ದುಗಳನ್ನು ಸೇವಿಸಿ.

*ಚರ್ಮವನ್ನು ಹೈಡ್ರೇಟ್ ಮಾಡುತ್ತಿರಿ. ಇಲ್ಲವಾದರೆ ಚರ್ಮ ಡ್ರೈ ಆಗಿ ತುರಿಕೆ ಉಂಟಾಗುತ್ತದೆ. ಹಾಗಾಗಿ ಅಲೋವೆರಾ ಜೆಲ್ ಹಚ್ಚುತ್ತಿರಿ. ಇದು ಚರ್ಮವನ್ನು ಹೈಡ್ರೇಟ್ ಮಾಡುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...