alex Certify ‘ಹೃದಯಾಘಾತ’ ಅಪಾಯವನ್ನು 4 ಪಟ್ಟು ಹೆಚ್ಚಿಸುತ್ತೆ ಬಾಲ್ಯದಲ್ಲಿ ಕಾಡುವ ಈ ಸಮಸ್ಯೆ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಹೃದಯಾಘಾತ’ ಅಪಾಯವನ್ನು 4 ಪಟ್ಟು ಹೆಚ್ಚಿಸುತ್ತೆ ಬಾಲ್ಯದಲ್ಲಿ ಕಾಡುವ ಈ ಸಮಸ್ಯೆ….!

ಬಾಲ್ಯ ಮತ್ತು ಹದಿಹರೆಯದಲ್ಲಿ ಅಧಿಕ ರಕ್ತದೊತ್ತಡದ ತೊಂದರೆ ಇದ್ದರೆ ಹೃದಯಾಘಾತ ಮತ್ತು ಪಾರ್ಶ್ವವಾಯುವಿನಂತಹ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಬಾಲ್ಯದಲ್ಲೇ ಕಾಡುವ ಬಿಪಿ ಸಮಸ್ಯೆ  ಪ್ರೌಢಾವಸ್ಥೆಯಲ್ಲಿ ಹೃದಯಾಘಾತದ ಅಪಾಯವನ್ನು ನಾಲ್ಕು ಪಟ್ಟು ಹೆಚ್ಚಿಸುತ್ತದೆ.

ಕೆನಡಾದ ಒಂಟಾರಿಯೊದಲ್ಲಿ ನಡೆಸಿದ ಸಂಶೋಧನೆಯಲ್ಲಿ ಈ ಸಂಗತಿ ಬಹಿರಂಗವಾಗಿದೆ. 1996 ರಿಂದ  2021ರ ನಡುವೆ ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಬಳಲುತ್ತಿದ್ದ  25,605 ಮಕ್ಕಳು ಮತ್ತು ಹದಿಹರೆಯದವರ ಮೇಲೆ ಈ ಸಂಶೋಧನೆಯನ್ನು ನಡೆಸಲಾಗಿದೆ.

ಈ ಸಂಶೋಧನೆಯು ಅಧಿಕ ರಕ್ತದೊತ್ತಡ ನಿಯಂತ್ರಿಸುವ ಮತ್ತು ಚಿಕ್ಕ ವಯಸ್ಸಿನಲ್ಲೇ ಅದರ ಅಪಾಯಗಳನ್ನು ಕಡಿಮೆ ಮಾಡುವ ಪ್ರಾಮುಖ್ಯತೆಯನ್ನು ಒತ್ತಿಹೇಳುತ್ತದೆ.

* ಬಾಲ್ಯದ ಅಧಿಕ ರಕ್ತದೊತ್ತಡದ ಗಂಭೀರ ಪರಿಣಾಮ: ಬಾಲ್ಯದ ಅಧಿಕ ರಕ್ತದೊತ್ತಡವು ವಯಸ್ಕ ಜೀವನದ ಮೇಲೆ ಆಳವಾದ ಪ್ರಭಾವವನ್ನು ಬೀರುತ್ತದೆ. ಹೃದಯದ ಕಾಯಿಲೆಗೆ ಕಾರಣವಾಗುತ್ತದೆ.

* ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯ ಹೆಚ್ಚ: ಅಧಿಕ ರಕ್ತದೊತ್ತಡ ಹೊಂದಿರುವ ಮಕ್ಕಳು ಬೆಳೆದಾಗ ಹೃದಯಾಘಾತ, ಪಾರ್ಶ್ವವಾಯು ಅಥವಾ ಹೃದಯ ಶಸ್ತ್ರಚಿಕಿತ್ಸೆಯ ಅಪಾಯವನ್ನು ಎರಡರಿಂದ ನಾಲ್ಕು ಪಟ್ಟು ಹೆಚ್ಚು ಹೊಂದಿರುತ್ತಾರೆ.

* ಆರಂಭಿಕ ಗುರುತಿಸುವಿಕೆ ಮತ್ತು ಚಿಕಿತ್ಸೆಯ ಅಗತ್ಯತೆ: ಈ ಸಂಶೋಧನೆಯ ಪ್ರಕಾರ ಮಕ್ಕಳು ಮತ್ತು ಹದಿಹರೆಯದವರಲ್ಲಿ ಅಧಿಕ ರಕ್ತದೊತ್ತಡವನ್ನು ಮೊದಲೇ ಗುರುತಿಸುವುದು ಮತ್ತು ಚಿಕಿತ್ಸೆ ನೀಡುವುದು ಬಹಳ ಮುಖ್ಯ.

ಬಾಲ್ಯದಲ್ಲಿ ಅಧಿಕ ರಕ್ತದೊತ್ತಡದ ಲಕ್ಷಣಗಳು

ಮಕ್ಕಳಲ್ಲಿ ಅಧಿಕ ರಕ್ತದೊತ್ತಡದ ಲಕ್ಷಣಗಳನ್ನು ಗುರುತಿಸುವುದು ಕಷ್ಟಕರ. ಸಾಮಾನ್ಯವಾಗಿ ತಲೆನೋವು, ಆಯಾಸ, ಮೂಗಿನಲ್ಲಿ  ರಕ್ತಸ್ರಾವ ಮತ್ತು ಉಸಿರಾಟದ ತೊಂದರೆಗಳಂತಹ ಸಾಮಾನ್ಯ ಲಕ್ಷಣಗಳ ಬಗ್ಗೆ ಮಕ್ಕಳು ಗೊಂದಲಕ್ಕೊಳಗಾಗುತ್ತಾರೆ.

ಅಧಿಕ ರಕ್ತದೊತ್ತಡದಿಂದಾಗಿ ಸ್ಥೂಲಕಾಯತೆ, ಮೂತ್ರಪಿಂಡದ ತೊಂದರೆಗಳು ಕಾಣಿಸಿಕೊಳ್ಳಬಹುದು. ಕೆಲವು ಔಷಧಿಗಳು ಕೂಡ ಇದಕ್ಕೆ ಕಾರಣವಾಗುತ್ತವೆ. ಇದಲ್ಲದೆ ಆನುವಂಶಿಕ ಕಾರಣಗಳಿಂದಲೂ ಅಧಿಕ ರಕ್ತದೊತ್ತಡ ಬರಬಹುದು.

ಮಕ್ಕಳಲ್ಲಿ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಲು ಅನೇಕ ಪರಿಹಾರಗಳಿವೆ. ಜೀವನಶೈಲಿಯ ಬದಲಾವಣೆ, ಔಷಧಿ ಮತ್ತು ಇತರ ವೈದ್ಯಕೀಯ ಚಿಕಿತ್ಸೆಗಳ ಮೂಲಕ ಪರಿಹಾರ ಕಂಡುಕೊಳ್ಳಬಹುದು. ಆರೋಗ್ಯಕರ ಆಹಾರ, ನಿಯಮಿತ ವ್ಯಾಯಾಮ ಮತ್ತು ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳುವುದು ಕೂಡ ಬಹಳ ಮುಖ್ಯ.

ಪ್ರಮುಖವಾಗಿ ಪೋಷಕರು ತಮ್ಮ ಮಕ್ಕಳ ಆರೋಗ್ಯದ ಬಗ್ಗೆ ಜಾಗರೂಕರಾಗಿರಬೇಕು. ನಿಯಮಿತವಾಗಿ ವೈದ್ಯರಿಂದ ಪರೀಕ್ಷಿಸಬೇಕು. ಮಗುವಿನಲ್ಲಿ ಅಧಿಕ ರಕ್ತದೊತ್ತಡದ ಯಾವುದೇ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...