ಕೇರಳ ಹಣಕಾಸು ಸಚಿವ ಟಿ.ಎಂ. ಥಾಮಸ್ ಅಧಿವೇಶನದ ಕೊನೆಯ ಬಜೆಟ್ ಅನ್ನು ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಿದ್ದಾರೆ.
ಎಲ್ಲರಿಗೂ ಲ್ಯಾಪ್ಟಾಪ್ ಖರೀದಿಗೆ ಸಾಲ ನೀಡುವ ಜೊತೆಗೆ 8 ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಲಾಗಿದೆ. ವಿಧಾನಸಭೆಯಲ್ಲಿ ಎಲ್.ಡಿ.ಎಫ್. ಸರ್ಕಾರ ಮಂಡಿಸಿದ ಕೊನೆಯ ಬಜೆಟ್ ಇದಾಗಿದೆ. ಮೇ ತಿಂಗಳಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಮುಂದಿನ 5 ವರ್ಷಗಳ ಸರ್ಕಾರದ ಕಾರ್ಯಸೂಚಿಯನ್ನು ಟಿ.ಎಂ. ಥಾಮಸ್ ಬಜೆಟ್ನಲ್ಲಿ ಅನಾವರಣಗೊಳಿಸಿದ್ದಾರೆ.
8 ಲಕ್ಷ ಜನರಿಗೆ ಉದ್ಯೋಗ ಕಲ್ಪಿಸುವ ಭರವಸೆ ನೀಡಿದ್ದಾರೆ. ಕೌಶಲ್ಯಾಭಿವೃದ್ಧಿ, ಕೌಶಲ್ಯ ವಿಕಾಸ ಯೋಜನೆ ತರಬೇತಿಯೊಂದಿಗೆ ಉದ್ಯೋಗ ಅವಕಾಶ ಕಲ್ಪಿಸಲಾಗುತ್ತದೆ. 50 ಲಕ್ಷ ವಿದ್ಯಾವಂತ ಯುವಕರಿಗೆ ಸಮರೋಪಾದಿಯಲ್ಲಿ ತರಬೇತಿ ನೀಡಲಾಗುತ್ತದೆ. 8 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. 20 ಲಕ್ಷ ಜನರಿಗೆ ಡಿಜಿಟಲ್ ಪ್ಲಾಟ್ಫಾರಂ ಮೂಲಕ ಮುಂದಿನ ಐದು ವರ್ಷದಲ್ಲಿ ಉದ್ಯೋಗವಕಾಶ ಕಲ್ಪಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.
ಸಿಎಮ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರದಿಂದ ಲ್ಯಾಪ್ಟಾಪ್ ವಿತರಣೆ ಯೋಜನೆಯನ್ನು ವಿಸ್ತರಿಸಲಾಗಿದ್ದು, ರಾಜ್ಯದ ಪ್ರತಿ ಮನೆಗೂ ಲ್ಯಾಪ್ಟಾಪ್ ಖರೀದಿಗೆ ಸಾಲ ನೀಡುವ ಯೋಜನೆ ರೂಪಿಸಲಾಗಿದೆ. 2021 ರ ಏಪ್ರಿಲ್ ನಿಂದ ವಿವಿಧ ಕಲ್ಯಾಣ ಯೋಜನೆಗಳ ಪಿಂಚಣಿಯನ್ನು 1500 ರೂ.ನಿಂದ 1600 ರೂಪಾಯಿಗೆ ಏರಿಕೆ ಮಾಡಲಾಗಿದೆ.