ಪಣಜಿ: ಜೂನ್ ಅಂತ್ಯದಿಂದ ಬಿಪಿಎಲ್ ಕುಟುಂಬದವರಿಗೆ 3 ಉಚಿತ LPG ಸಿಲಿಂಡರ್ ಗಳನ್ನು ಒದಗಿಸಲಾಗುವುದು. ಚುನಾವಣಾ ಭರವಸೆಯನ್ನು ಈಡೇರಿಸಿರುವ ಗೋವಾ ಸರ್ಕಾರ ಜೂನ್ ಅಂತ್ಯದೊಳಗೆ ಬಡತನ ರೇಖೆಗಿಂತ ಕೆಳಗಿರುವ(ಬಿಪಿಎಲ್) ಜನರಿಗೆ ಮೂರು ಉಚಿತ ಅಡುಗೆ ಅನಿಲ ಸಿಲಿಂಡರ್ ಗಳನ್ನು ನೀಡುವುದಾಗಿ ಘೋಷಿಸಿದೆ.
ರಾಜ್ಯದ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಗೋವಿಂದಗೌಡ ಅವರು ಈ ಘೋಷಣೆ ಮಾಡಿದ್ದಾರೆ. ಈ ಯೋಜನೆಯಿಂದ ಒಟ್ಟು ವಾರ್ಷಿಕ ಆದಾಯ 4 ಲಕ್ಷ ರೂ.ಗಿಂತ ಕಡಿಮೆ ಇರುವ ಕುಟುಂಬಗಳು ಪ್ರಯೋಜನ ಪಡೆಯಲಿವೆ.
37,000 ಬಿಪಿಎಲ್ ಕುಟುಂಬಗಳಿಗೆ 3 ಸಿಲಿಂಡರ್ ಗಳನ್ನು ಉಚಿತವಾಗಿ ನೀಡಲಾಗುವುದು. ಪ್ರಸಕ್ತ ಹಣಕಾಸು ವರ್ಷದ ಅಂತ್ಯದಲ್ಲಿ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.
ಅವರು ಎಷ್ಟು ಸಿಲಿಂಡರ್ ತೆಗೆದುಕೊಂಡಿದ್ದಾರೆ ಎಂಬುದನ್ನು ಪರಿಶೀಲಿಸುತ್ತೇವೆ. ಸಾಮಾನ್ಯವಾಗಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಆರು ಸಿಲಿಂಡರ್ ಗಳು ಬೇಕಾಗುತ್ತವೆ. ನಾವು ಅವರ ಹಣವನ್ನು ಮೂರು ಸಿಲಿಂಡರ್ ಗಳಿಗೆ ಮರುಪಾವತಿ ಮಾಡುತ್ತೇವೆ ಎಂದು ಸಚಿವರು ಹೇಳಿದರು.
ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ಬಿಪಿಎಲ್ ಕುಟುಂಬದವರಿಗೆ ಉಚಿತ ಎಲ್.ಪಿ.ಜಿ. ಸಿಲಿಂಡರ್ ಗಳನ್ನು ನೀಡುವುದಾಗಿ ಭರವಸೆ ನೀಡಿತ್ತು.