ಥೇಟ್ ಹಲಸಿನ ಹಣ್ಣಿನಂತೆ ಕಾಣುವ ಡುರಿಯನ್ ಬಗ್ಗೆ ಬಹುತೇಕರಿಗೆ ಗೊತ್ತಿರಬಹುದು. ಇದು ತುಂಬಾ ಪೌಷ್ಟಿಕಾಂಶಭರಿತ ಹಣ್ಣು. ಇಂಡೋನೇಷ್ಯಾ ಮತ್ತು ಸಿಂಗಾಪುರದ ರಾಷ್ಟ್ರೀಯ ಹಣ್ಣು ಕೂಡ. ಆದರೆ ಡುರಿಯನ್ ಕೊಂಚ ದುರ್ನಾತವನ್ನು ಹೊಂದಿರುತ್ತದೆ. ಕತ್ತರಿಸಿದಾಗ ಈ ಹಣ್ಣಿನಿಂದ ಕೆಟ್ಟ ವಾಸನೆ ಬರುತ್ತದೆ. ಹಾಗಾಗಿ ಆಗ್ನೇಯ ಏಷ್ಯಾದಲ್ಲಿ ಅನೇಕ ಹೋಟೆಲ್‌ಗಳು ಮತ್ತು ಸಾರಿಗೆ ವಾಹನಗಳಲ್ಲಿ ಇದನ್ನು ನಿಷೇಧಿಸಲಾಗಿದೆ.
ಕೆಟ್ಟ ವಾಸನೆ ಹೊಂದಿದ್ದರೂ ಡುರಿಯನ್ ಅನೇಕ ಜೀವಸತ್ವಗಳು ಮತ್ತು ಖನಿಜಗಳಿಂದ ತುಂಬಿರುವ ಆರೋಗ್ಯಕರ ಹಣ್ಣು. ಇದನ್ನು ತಿನ್ನುವುದರಿಂದ ದೇಹಕ್ಕೆ ಹತ್ತಾರು ರೀತಿಯ ಪ್ರಯೋಜನಗಳಿವೆ.
ಡುರಿಯನ್ ಹಣ್ಣಿನ ತಿರುಳನ್ನು ತಿನ್ನುವುದರಿಂದ ದೇಹಕ್ಕೆ ವಿಟಮಿನ್ ಎ, ವಿಟಮಿನ್ ಸಿ, ಉತ್ಕರ್ಷಣ ನಿರೋಧಕಗಳು, ಫೋಲಿಕ್ ಆಮ್ಲ, ಥಯಾಮಿನ್, ರೈಬೋಫ್ಲಾವಿನ್, ನಿಯಾಸಿನ್ ದೊರೆಯುತ್ತದೆ. ಅಷ್ಟೇ ಅಲ್ಲ ರಂಜಕ, ಪೊಟ್ಯಾಸಿಯಮ್, ಕಬ್ಬಿಣ, ಕ್ಯಾಲ್ಸಿಯಂ, ಮೆಗ್ನೀಸಿಯಮ್ ಕೂಡ ಈ ಹಣ್ಣಿನಲ್ಲಿ ಸಾಕಷ್ಟು ಪ್ರಮಾಣದಲ್ಲಿದೆ.
ಹೃದಯದ ಆರೋಗ್ಯ ಸುಧಾರಿಸುತ್ತದೆ
ಡುರಿಯನ್ ಹಣ್ಣಿನಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಇದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಬಿಪಿಯನ್ನು ನಿಯಂತ್ರಿಸಿದಾಗ ಹೃದಯದ ಆರೋಗ್ಯಕ್ಕೆ ಯಾವುದೇ ಅಪಾಯವಿಲ್ಲ. ಈ ಹಣ್ಣಿನಲ್ಲಿರುವ ಡಯೆಟರಿ ಫೈಬರ್ ರಕ್ತನಾಳಗಳಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಇದರಿಂದಾಗಿ ಪರಿಧಮನಿಯ ಹೃದಯ ಕಾಯಿಲೆಯನ್ನು ತಡೆಯಬಹುದು.
ರೋಗನಿರೋಧಕ ಶಕ್ತಿ ಹೆಚ್ಚಳ
ಡುರಿಯನ್ ಹಣ್ಣನ್ನು ತಿನ್ನುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಇದು ಬದಲಾಗುತ್ತಿರುವ ಹವಾಮಾನದಲ್ಲಿ ಬ್ಯಾಕ್ಟೀರಿಯಾ, ವೈರಸ್ ಮತ್ತು ಶಿಲೀಂಧ್ರಗಳಿಂದ ಉಂಟಾಗುವ ಸೋಂಕುಗಳಿಂದ ನಮ್ಮನ್ನು ರಕ್ಷಿಸುತ್ತದೆ. ದೇಹದ ರಕ್ಷಣಾ ಕವಚದಂತೆ ಕೆಲಸ ಮಾಡುತ್ತದೆ. ವಿಟಮಿನ್ ಸಿ ಡುರಿಯನ್ ಹಣ್ಣಿನಲ್ಲಿ ಹೇರಳವಾಗಿದ್ದು, ಇದು ಕೂಡ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಜ್ವರ, ಶೀತ, ಕೆಮ್ಮಿನಂತಹ ಕಾಯಿಲೆಗಳು ಬರುವುದಿಲ್ಲ.
ಮಧುಮೇಹಕ್ಕೆ ಮದ್ದು
ಟೈಪ್ 2 ಡಯಾಬಿಟಿಸ್‌ನಿಂದ ಬಳಲುತ್ತಿರುವವರು ಡುರಿಯನ್ ಹಣ್ಣನ್ನು ಸೇವನೆ ಮಾಡಬೇಕು. ಇದು ತುಂಬಾ ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುವುದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ದಿಢೀರನೆ ಹೆಚ್ಚಿಸುವುದಿಲ್ಲ.
ಜೀರ್ಣಕ್ರಿಯೆ ಸುಧಾರಣೆ
ಡುರಿಯನ್ ಹೇರಳವಾದ ಫೈಬರ್ ಹೊಂದಿರುವುದರಿಂದ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ನಿತ್ಯವೂ ಇದನ್ನು ತಿನ್ನುವವರಿಗೆ ಮಲಬದ್ಧತೆ, ಅಜೀರ್ಣ, ಅಸಿಡಿಟಿ, ಗ್ಯಾಸ್ ಸೇರಿದಂತೆ ಹಲವು ಹೊಟ್ಟೆಯ ಸಮಸ್ಯೆಗಳು ಕಾಡುವುದಿಲ್ಲ. ಇದರಲ್ಲಿರುವ ಥಯಾಮಿನ್ ವಯಸ್ಸಾದವರಲ್ಲಿ ಹಸಿವನ್ನು ಹೆಚ್ಚಿಸುತ್ತದೆ ಮತ್ತು ಒಟ್ಟಾರೆ ಆರೋಗ್ಯವನ್ನು ಸುಧಾರಿಸುತ್ತದೆ.