ಬೆಳ್ಳುಳ್ಳಿ ಸೇವನೆಯಿಂದ ಹೃದಯದ ಆರೋಗ್ಯವನ್ನು ಕಾಪಾಡಬಹುದು ಎಂಬುದು ನಿಮಗೆಲ್ಲಾ ತಿಳಿದೇ ಇದೆ. ಆದರೆ ಅದನ್ನು ಹೇಗೆ ಮತ್ತು ಎಷ್ಟರ ಪ್ರಮಾಣದಲ್ಲಿ ಸೇವಿಸಬೇಕು ಎಂಬುದು ನಿಮಗೆ ತಿಳಿದಿದೆಯೇ.
ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಬೆಳ್ಳುಳ್ಳಿ ಸೇವಿಸುವುದು ಬಹಳ ಒಳ್ಳೆಯದು. ದಿನಾ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಎರಡು ಎಸಳು ಬೆಳ್ಳುಳ್ಳಿಯನ್ನು ಹುರಿದು ತಿನ್ನುವುದರಿಂದ ಬೊಜ್ಜು ಕಡಿಮೆಯಾಗುತ್ತದೆ. ಹಸಿಯಾಗಿ ಸೇವಿಸುವುದರಿಂದ ದೇಹದಲ್ಲಿ ಉಷ್ಣದ ಲಕ್ಷಣಗಳು ಕಂಡು ಬಂದಾವು. ಹಾಗಾಗಿ ಹುರಿದು ತಿನ್ನುವುದು ಬಹಳ ಒಳ್ಳೆಯದು.
ಚಳಿಗಾಲದಲ್ಲಿ ಹೆಚ್ಚಾಗಿ ಕಾಡುವ ಸೀನು, ಕೆಮ್ಮು ಸಮಸ್ಯೆಗೆ ಬೆಳ್ಳುಳ್ಳಿಯಲ್ಲಿ ಪರಿಹಾರವಿದೆ. ಇದನ್ನು ಜಜ್ಜಿ ರಸ ಹಿಂಡಿ ಜೇನಿನೊಂದಿಗೆ ಬೆರೆಸಿ ಸವಿಯುವುದರಿಂದ ನಿಮ್ಮ ಸಮಸ್ಯೆ ಬಹುಬೇಗ ನಿವಾರಣೆಯಾಗುತ್ತದೆ.
ನಿತ್ಯ ಬೆಳ್ಳುಳ್ಳಿ ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ರಕ್ತದ ಸಕ್ಕರೆಯಂಶ ನಿಯಂತ್ರಣಕ್ಕೆ ಬರುತ್ತದೆ. ರಕ್ತದೊತ್ತಡ ನಿಯಂತ್ರಿಸಿ ಗ್ಯಾಸ್ಟ್ರಿಕ್ ಸಮಸ್ಯೆಯನ್ನೂ ದೂರಮಾಡುತ್ತದೆ. ಮಲಬದ್ಧತೆ ಸಮಸ್ಯೆ ದೂರ ಮಾಡಲೂ ಇದು ನೆರವಾಗುತ್ತದೆ.